ಸರ್ಕಾರಿ ಪ್ರೌಢ ಶಾಲೆಯ ಕಟ್ಟಡದ ದುರಸ್ತಿ ಕಾರ್ಯ ವೀಕ್ಷಿಸಿದ ಶಾಸಕ ಗಾಲಿ ಜನಾರ್ದನ ರೆಡ್ಡಿ
ಗಂಗಾವತಿ 28 :- ನಗರದ ಸರಕಾರಿ ಜೂನಿಯರ್ ಕಾಲೇಜು ಆವರಣಕ್ಕೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಮಂಗಳವಾರದಂದು ಭೇಟಿ ನೀಡಿ ಅಲ್ಲಿನ ಸರ್ಕಾರಿ ಪ್ರೌಢ ಶಾಲೆಯ ಕಟ್ಟಡದ ದುರಸ್ತಿ ಕಾರ್ಯವನ್ನು ವೀಕ್ಷಣೆ ಮಾಡಿದರು.
ಶಾಲೆಯ ಕಟ್ಟಡ ಸಂಪೂರ್ಣ ಶಿಥಿಲಾವಸ್ತಗೆ ಬಂದಿದ್ದು, ಕೊಠಡಿಗಳ ಮೇಲ್ಛಾವಣಿ ಕಿತ್ತು ಬಿದ್ದಿರುವ ಪರಿಸ್ಥಿತಿಯನ್ನು ಕಂಡು ಮರುಕ ವ್ಯಕ್ತಪಡಿಸಿದರು. ಕಟ್ಟಡದ ದುರಸ್ತಿ ಕಾಮಗಾರಿಯನ್ನುಯನ್ನು ಕೈಗೊಳ್ಳಲಾಗಿದ್ದು, ಸರಿಯಾದ ರೀತಿಯಲ್ಲಿ ದುರಸ್ತಿ ಮಾಡದೇ ಇರುವುದು ಕಂಡು ಶಾಸಕರು ಬೇಸರ ವ್ಯಕ್ತಪಡಿಸಿದರು.ಸ್ಥಳದಲ್ಲೇ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಮಾತನಾಡಿ ದುರಸ್ತಿ ಕೆಲಸದಲ್ಲಿ ಲೋಪದೋಷಗಳು ಇದ್ದು ತಕ್ಷಣ ಸರಿಪಡಿಸುವಂತೆ ಸೂಚಿಸಿದರು.
ಗಂಗಾವತಿ ತಾಲ್ಲೂಕ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್ ಗೌಡ ಪಾಟೀಲ್, ಶಾಲೆಯ ಉಪ ಪ್ರಾಂಶುಪಾಲರಾದ ಗದ್ದೆಪ್ಪ, ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಪರಶುರಾಮ ಸಾವಂತ್, ಮುಖಂಡರಾದ ಮನೋಹರ ಗೌಡ ಹೇರೂರು, ಸಂಜಯ ಬೆಟಗೇರಿ, ವೀರೇಶ್ ಬಲಕುಂದಿ, ಕೃಷ್ಣಾ ಸಾ ವೈ ದಲಬಂಜನ, ಚಂದ್ರಶೇಖರ ಹಿರೂರು, ವೈ ಎಮ್ ಪುಂಡಗೌಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.