84 ಲಕ್ಷ ರೂ,ಗಳ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕ ಗಣೇಶ ಶಂಕುಸ್ಥಾಪನೆ
ಕಂಪ್ಲಿ 04: ತಾಲೂಕಿನ ಮೆಟ್ರಿ ಗ್ರಾಮದಲ್ಲಿ 2025-26ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಪರ್ಯಾಯ ಮೈಕ್ರೋ ಯೋಜನೆಯಡಿಯ 84 ಲಕ್ಷ ವೆಚ್ಚದಲ್ಲಿ ನಿರ್ಮಿಸಲಿರುವ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕ ಜೆ.ಎನ್.ಗಣೇಶ ಇವರು ಬುಧವಾರ ಭೂಮಿ ಪೂಜೆ ಸಲ್ಲಿಸಿದರು. ನಂತರ ಶಾಸಕ ಜೆ.ಎನ್.ಗಣೇಶ್ ಮಾತನಾಡಿ, ಮೆಟ್ರಿ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಸಾಕಷ್ಟು ಅನುದಾನದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಯೊಂದಿಗೆ ನಾನಾ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಕಾಲಮಿತಿಯೊಳಗೆ ಗುಣಮಟ್ಟದ ಕಾಮಗಾರಿ ಮಾಡಿ, ಜನರ ಸದ್ಬಳಕೆಗೆ ಅನುವು ಮಾಡಿಕೊಡಬೇಕು. ಈಗಾಗಲೇ ಸಾಕಷ್ಟು ಅನುದಾನ ತಂದು ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಮುಂದಿನ ದಿನದಲ್ಲಿ ಉಳಿದ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ನೆಣಕಿ ಗೀರೀಶ್, ಸದಸ್ಯ ಹೆಚ್.ಕುಮಾರ, ಮುಖಂಡರಾದ ಹೊಸಕೋಟೆ ಜಗದೀಶ, ಹೊನ್ನಳ್ಳಿ ಗಂಗಾಧರಗೌಡ, ಮರೇಗೌಡ, ಹರಿಜನ ಜಗದೀಶ, ತಿಪ್ಪೇಶ, ಹೊನ್ನಳ್ಳಿ ಶಿವಪುತ್ರ್ಪ, ಸ್ವಾಮಿ, ನಾಯಕರ ಹನುಮಯ್ಯ, ಚೇತನ್, ಜಡೆಪ್ಪ ಸೇರಿದಂತೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.