ಮೀನುಗಾರರಿಗೆ ಸಲಕರಣೆ ಕಿಟ್ ವಿತರಿಸಿದ ಶಾಸಕ ಜೆ.ಎನ್.ಗಣೇಶ್
MLA J.N. Ganesh distributed equipment kits to fishermen
ಬಳ್ಳಾರಿ 24: ಮೀನುಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಿಶೇಷ ಘಟಕ ಉಪಯೋಜನೆಯಡಿ ಕಂಪ್ಲಿ ಮತ್ತು ಕುರುಗೋಡು ಮೀನುಗಾರರಿಗೆ ಕಂಪ್ಲಿ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳಿ ನಿಯಮಿತ (ಕಾವೇರಿ ಹ್ಯಾಂಡ್‌ಲೂಮ್ಸ್) ದ ಅಧ್ಯಕ್ಷರೂ ಆದ ಜೆ.ಎನ್.ಗಣೇಶ್ ಅವರು ಮಂಗಳವಾರ ಮೀನುಗಾರಿಕೆ ಸಲಕರಣೆ ಕಿಟ್ ವಿತರಿಸಿದರು.
ಫಲಾನುಭವಿ ಯೋಜನೆಯಡಿ ಮೀನು ಮಾರಾಟಗಾರ ರಾಹುಲ್ ನಾಗಪ್ಪ ಅವರಿಗೆ ಶಾಸಕರು ನಾಲ್ಕು ಚಕ್ರದ ವಾಹನಖರೀದಿಗೆ ಸಹಾಯಧನದ ಚೆಕ್ ವಿತರಿಸಿದರು. ಇದೇ ವೇಳೆ ಮತ್ಸ್ಯಾಶ್ರಯ ಫಲಾನುಭವಿಗಳಿಗೆ ಮನೆ ನಿರ್ಮಾಣಕ್ಕಾಗಿ ಕಾರ್ಯಾದೇಶ ಪ್ರತಿ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಮೀನುಗಾರಿಕೆ ಉಪನಿರ್ದೇಶಕ ಶಿವಣ್ಣ, ಮೀನುಗಾರಿಕೆ ಸಹಾಯಕ ನಿರ್ದೇಶಕರಾದ ಬಿ.ಭಾವನ ಸೇರಿದಂತೆ ಇಲಾಖಾ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 