ರಸ್ತೆ ಕಾಮಗಾರಿಗಳಿಗೆ ಶಾಸಕ ಜೆ.ಎನ್.ಗಣೇಶ ಶಂಕುಸ್ಥಾಪನೆ
MLA J.N. Ganesh lays foundation stone for road works
ಕಂಪ್ಲಿ 11: ಚುನಾವಣಾ ಪೂರ್ವದಲ್ಲಿ ನೀಡಿದಂತಹ ಭರವಸೆಯಂತೆ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದು, ಇನ್ನುಳಿದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು. ತಾಲೂಕಿನ ಮೆಟ್ರಿ ಗ್ರಾಮದಲ್ಲಿ 2024-25ನೇ ಸಾಲಿನ 5054ರ ಎಸ್ಸಿಪಿ-ಟಿಎಸ್ಪಿ ಯೋಜನೆಯಡಿ ಸುಮಾರು 50 ಲಕ್ಷ ವೆಚ್ಚದ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಿದ ನಂತರ ಮಾತನಾಡಿ, ಜನರ ಆಶೀರ್ವಾದಿಂದ ಕ್ಷೇತ್ರದಲ್ಲಿ ಶಾಸಕನಾಗಿ ಕೆಲಸ ಮಾಡಲಾಗುತ್ತಿದೆ. ಕಂಪ್ಲಿ ತಾಲೂಕು ಸೇರಿದಂತೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ನಾನಾ ಇಲಾಖೆಯಿಂದ ಸಾಕಷ್ಟು ಅನುದಾನ ತಂದು ಅಭಿವೃದ್ಧಿಗೊಳಿಸುವ ಮೂಲಕ ಮೂಲಸೌಕರ್ಯ ಒದಗಿಸಲಾಗುತ್ತಿದೆ. ಈಗಾಗಲೇ ಮುಕ್ಕಾಲು ಭಾಗದಷ್ಟು ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಆದರೆ, ರೈತರು ಅಭಿವೃದ್ಧಿಗೊಂಡ ರಸ್ತೆ ಮೇಲೆ ಟ್ರ್ಯಾಕ್ಟರ್ ವ್ಹೀಲ್ ಹಾಕುವುದರಿಂದ ರಸ್ತೆಗಳು ಹಾಳಾಗುವಂತಾಗಿದೆ. ಸಾಕಷ್ಟು ಬಾರಿ ಮನವಿ ಮಾಡಿದರೂ, ರೈತರು ವ್ಹೀಲ್ ಹಾಕುವುದು ಬಿಡುತ್ತಿಲ್ಲ. ರಸ್ತೆಗಳು ಉಳಿಯಬೇಕಾದರೆ, ವ್ಹೀಲ್ ಹಾಕುವುದನ್ನು ರೈತರು ಬಿಡಬೇಕು ಎಂದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಶ್ರೀನಿವಾಸರಾವ್, ಗ್ರಾಪಂ ಅಧ್ಯಕ್ಷೆ ನಾಗಮ್ಮ, ಸದಸ್ಯರಾದ ನೆಣಕಿ ಗೀರೀಶ್, ಹೆಚ್.ಕುಮಾರಸ್ವಾಮಿ, ಮುಖಂಡರಾದ ಹೊನ್ನಳ್ಳಿ ಗಂಗಾಧರಗೌಡ, ಹೊಸಕೋಟೆ ಜಗದೀಶ, ತಿಪ್ಪೇಶಿ, ಕನಕಪ್ಪ, ತಿಮ್ಮಯ್ಯ, ಸ್ವಾಮಿ, ಶೇಖರ್ಪ, ಶಂಕ್ರ್ಪ, ಮಲ್ಲಿ, ಮೆಟ್ರಿ ಶಿವಪುತ್ರ್ಪ ಹೊನ್ನಳ್ಳಿ, ನಾಗರಾಜ ಸೇರಿದಂತೆ ಜನಪ್ರತಿನಿಧಿಗಳು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಇದ್ದರು. ಚಿಕ್ಕಜಾಯಿಗನೂರು: ಹಂಪಾದೇವನಹಳ್ಳಿ ಗ್ರಾಪಂಯ ಚಿಕ್ಕಜಾಯಿಗನೂರು ಗ್ರಾಮದಲ್ಲಿ 2024-25ನೇ ಸಾಲಿನ ಅಪ್ಪೆಂಡಿಕ್ಸ್ ಯೋಜನೆಯಡಿ ಸುಮಾರು 100 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಗಣೇಶ್ ಇವರು ಅಡಿಗಲ್ಲು ಪೂಜೆ ಸಲ್ಲಿಸಿದರು. ಹಾಗೂ ಇಲ್ಲಿನ ಹಿರೇಜಾಯಿಗನೂರು ಗ್ರಾಮದ ಎಸ್ಸಿ ಕಾಲೋನಿಯಲ್ಲಿ ಕೆಕೆಆರ್‌ಡಿಬಿ ಯೋಜನೆಯಡಿ ಸುಮಾರು 50 ಲಕ್ಷ ವೆಚ್ಚದ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕ ಗಣೇಶ ಚಾಲನೆ ನೀಡಿದರು. ಸ್ಥಳೀಯ ಮುಖಂಡರು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 