ಖಾಸ್ಗತೇಶ್ವರ ಮಠಕ್ಕೆ ಶಾಸಕ ಕಂದಕೂರ ಭೇಟಿ
MLA Kandakur visits Khasgateshwara Matha
ತಾಳಿಕೋಟಿ 19: ಯಾದಗಿರಿ ಜಿಲ್ಲೆಯ ಗುರುಮಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ ಅವರು ಪಟ್ಟಣದ ಇತಿಹಾಸ ಪ್ರಸಿದ್ಧ ಖಾಸ್ಗತೇಶ್ವರ ಮಠಕ್ಕೆ ಭೇಟಿ ನೀಡಿ ಪೀಠಾಧಿಪತಿ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳ ಆಶೀರ್ವಾದ ಪಡೆದರು. ಗುರುವಾರ ಮಠಕ್ಕೆ ಆಗಮಿಸಿದ ಶಾಸಕ ಕಂದಕೂರ ಅವರು ಲಿಂಗೈಕ್ಯ ಖಾಸ್ಗತೇಶ್ವರ ಹಾಗೂ ವಿರಕ್ತ ಮಹಾಸ್ವಾಮಿಗಳ ಕರ್ತೃ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಸಿದ್ದಲಿಂಗ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಅವರು, ಶ್ರೀಗಳನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಂದಕೂರ, ಹಲವು ದಿನಗಳಿಂದ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆಯುವ ಆಸೆಯಿತ್ತು. ಕೆಲಸದ ಒತ್ತಡದಿಂದ ಸಾಧ್ಯವಾಗಿರಲಿಲ್ಲ. ಇದೀಗ ಭೇಟಿ ನೀಡಿ ಆಶೀರ್ವಾದ ಪಡೆದಿರುವುದು ತಮ್ಮ ಜೀವನದ ಮಹತ್ವದ ದಿನವಾಗಿದೆ ಎಂದು ಹೇಳಿದರು. ಶಾಸಕರನ್ನು ಮಠದ ವತಿಯಿಂದ ಸನ್ಮಾನಿಸಿ ಮಾತನಾಡಿದ ಸಿದ್ದಲಿಂಗ ಮಹಾಸ್ವಾಮಿಗಳು, ಶರಣಗೌಡ ಕಂದಕೂರ ಅವರು ಕ್ರಿಯಾಶೀಲ, ಸರಳ ಹಾಗೂ ಜನಪರ ಕಾಳಜಿಯುಳ್ಳ ಯುವ ರಾಜಕಾರಣಿಯಾಗಿದ್ದು, ಅವರಿಗೆ ರಾಜಕೀಯದಲ್ಲಿ ಉತ್ತಮ ಭವಿಷ್ಯವಿದೆ ಎಂದು ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಯಾದಗಿರಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಸುಭಾಸಚಂದ್ರ ಕಟಕಟಿ, ವಿಜಯಪುರ ಜಿಲ್ಲಾ ಜೆಡಿಎಸ್ ಮಾಜಿ ಅಧ್ಯಕ್ಷ ಬಸನಗೌಡ ಮಾಡಗಿ, ಮುಖಂಡರಾದ ನಿಂಗನಗೌಡ ಬಿರಾದಾರ, ಮಲ್ಲಿಕಾರ್ಜುನ ಅರುಣಿ, ಮಲ್ಲನಗೌಡ ಹೊಸಳ್ಳಿ, ನರಸಿಂಹರೆಡ್ಡಿ, ಶರಣು ಯಡಹಳ್ಳಿ, ಅಶೋಕರಡ್ಡಿ ಹೊನಗೇರಾ, ಶಾಸಕರ ಆಪ್ತ ಸಹಾಯಕ ಗುರುರಾಜ ಕುಲಕರ್ಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 