ನವನಗರದ ಬಸ್ ನಿಲ್ದಾಣ ಆವರಣದಲ್ಲಿ ಡಾಂಬರೀಕರಣಕ್ಕೆ ಶಾಸಕ ಮೇಟಿ ಚಾಲನೆ
MLA Meti launches asphalting project at Navanagar bus station premises
ಲೋಕದರ್ಶನ ವರದಿ
ಬಾಗಲಕೋಟೆ 13 : ಬಾಗಲಕೋಟೆ ನವನಗರದ ಬಸ್ ನಿಲ್ದಾಣ ಆವರಣದ ಪೂರ್ವ ಹಾಗೂ ದಕ್ಷಿಣ ಭಾಗದಲ್ಲಿ 105 ಲಕ್ಷ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಡಾಂಬರೀಕರಣ ಕಾಮಗಾರಿಕೆ ಶಾಸಕ ಉಮೇಶ ಮೇಟಿ ಶನಿವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಉಮೇಶ ಮೇಟಿ ಅವರು ಸಾರ್ವಜನಿಕರಿಗೆ ಉತ್ತಮ ಸಾರಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಬಸ್ ನಿಲ್ದಾಣದ ಮೂಲಭೂತ ಸೌಕರ್ಯ ಅಭಿವೃದ್ದಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ.
ನವನಗರದ ಬಸ ನಿಲ್ದಾಣಕ್ಕೆ ಪ್ರತಿದಿನ ಸಾವಿರಾರು ಪ್ರಯಾಣಿಕರು ಆಗಮಿಸುತ್ತಿದ್ದು, ಆವರಣದಲ್ಲಿ ಮಳೆಯಾದರೆ ನೀರು ನಿಲ್ಲುತ್ತಿತ್ತು ಇದರಿಂದ ಪ್ರಯಾಣಿಕರು ಹಾಗೂ ವಾಹನ ಚಾಲಕರು ತೊಂದರೆ ಅನುಭವಿಸುತ್ತಿದ್ದರು. ಈಗ 105 ಲಕ್ಷ ರೂ.ಗಳ ವೆಚ್ಚದ ಡಾಂಬರೀಕರಣ ಕಾಮಗಾರಿ ಕೈಗೊಳ್ಳುತ್ತಿದ್ದು, ಕಾಮಗಾರಿ ಪೂರ್ಣಗೊಂಡ ಬಳಿಕ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದರು.
ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿದ ಶಾಸಕ ಮೇಟಿ ಸಾರ್ವಜನಿಕರ ಹಣವನ್ನು ಸಮರ್ಕವಾಗಿ ಬಳಸಿಕೊಂಡು ಶಾಶ್ವತ ಅಬಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು. ಬಸ್ ನಿಲ್ದಾಣ ಆವರಣ ಅಭಿವೃದ್ದಿಯಿಂದ ಪ್ರಯಾಣಿಕರಿಗೆ ಸ್ವಚ್ಚ ಹಾಗೂ ಸುರಕ್ಷಿತ ವಾತಾವರಣ ನಿರ್ಮಾಣವಾಗಲಿದ್ದು, ಮಳೆಗಾಲದಲ್ಲಿ ಉಂಟಾಗುವ ನೀರು ನಿಲ್ಲುವ ಸಮಸ್ಯೆಗೂ ಪರಿಹಾರ ದೊರೆಯಲಿದೆ ಎಂದು ತಿಳಿಸಿದರು. ಅಭಿವೃದ್ದಿ ಕಾರ್ಯಗಳಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಲಭ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಅವರು ಡಾಂಬರೀಕರಣ ಕಾಮಗಾರಿ ನಿಗದಿತ ಅವಧಿಯಲ್ಲಿ ಗುಣಮಟ್ಟದಿಂದ ಕೂಡಿರಬೇಕು. ಬಹಳ ದಿನಗಳ ಕಾಲ ಇರಬೇಕು ಎಂದರು. ಕಾರ್ಯಕ್ರಮದಲ್ಲಿ ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಅನೀಕ ದಡ್ಡಿ, ಬುಡಾದ ಅಧ್ಯಕ್ಷ ಅಬ್ದುಲರಜಾಕ ಬೇನೂರ, ಸೇರಿದಂತೆ ಮಾಜಿ ಸಚಿವ ಎಸ್.ಆರ್.ಪಾಟೀಲ, ಮಾಜಿ ಜಿ.ಪಂ ಅಧ್ಯಕ್ಷ ಬಸವಂತಪ್ಪ ಮೇಟಿ, ಎಸ್.ಎಂ.ರಾಂಪೂರ, ಮಲ್ಲಣ್ಣ ಚರಂತಿಮಠ, ಸಂತೋಷ ಹೊಕ್ರಾಣಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 