ರೈತರೊಂದಿಗೆ ಶಾಸಕ ನಾಗೇಂದ್ರ ಸಂವಾದ: ಸಮಸ್ಯೆಗಳ ಇತ್ಯರ್ಥ
ಬಳ್ಳಾರಿ,ಏ.24: ಬಳ್ಳಾರಿ ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 19 ಗ್ರಾಪಂಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಿಡಿಒಗಳು ಹಾಗೂ ರೈತರೊಂದಿಗೆ ಶಾಸಕ ಬಿ.ನಾಗೇಂದ್ರ ಅವರು ಬಳ್ಳಾರಿ ತಾಲೂಕು ಪಂಚಾಯಿತಿ ವಾರ್ ರೂಂ ನಲ್ಲಿ ಕುಳಿತುಕೊಂಡು ವಿಡಿಯೋ ಕಾನ್ಫರೆನ್ಸ್ ಮೂಲಕ ಶುಕ್ರವಾರ ಸಂವಾದ ನಡೆಸಿದರು.
ಈ ಸಂದರ್ಭದಲ್ಲಿ ಗ್ರಾಮದ ನೈರ್ಮಲ್ಯ ಹಾಗೂ ಕುಡಿಯುವ ನೀರಿನ ಸಮಸ್ಯೆಗಳು ಸೇರಿದಂತೆ ರೈತರ ಕೃಷಿ ಸಂಬಂಧಿತ ಅನೇಕ ಸಮಸ್ಯೆಗಳನ್ನ ಅಲಿಸಿದರು ಸಂಬಂಧಪಟ್ಟ ಅಧಿಕಾರಿಗಳನ್ನ ಆನ್ ಲೈನ್ ನಲ್ಲಿಯೇ ಸಂಪಕರ್ಿಸಿ ಸಮಸ್ಯೆ ಪರಿಹರಿಸಿದ್ರೆ; ಇನ್ನುಳಿದಂತೆ ರೈತರ ಸಮಸ್ಯೆಗಳನ್ನು ಸಭೆಯಲ್ಲೆ ಇದ್ದ ಕೃಷಿ ಅಧಿಕಾರಿಗಳಿಗೆ ತಕ್ಷಣಕ್ಕೆ ಪರಿಹರಿಸುವಂತೆ ಸೂಚಿಸಿದರು.
ಈ ಸಭೆಯಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ಲಿಲಾವತಿ. ಜಿಪಂ ಸದಸ್ಯರಾದ ಅಲ್ಲಂ ಪ್ರಶಾಂತ್, ಹಂಪಮ್ಮ ಗೋವಿಂದ, ತಾಲೂಕು ಪಂಚಾಯಿತಿ ಕಾರ್ಯನಿವರ್ಾಹಕ ಅಧಿಕಾರಿ ಬಸಪ್ಪ.ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.