ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ನಾರಾ ಭರತ್ ರೆಡ್ಡಿ
MLA Nara Bharat Reddy performed Bhoomi Puja for various works
ಬಳ್ಳಾರಿ 16: ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾರಾ ಭರತ್ ರೆಡ್ಡಿ ಭೂಮಿ ಪೂಜೆ ನೆರವೇರಿಸಿದರು.ಗುರುವಾರ ಮಹರ್ಷಿ ವಾಲ್ಮೀಕಿ ವೃತ್ತ ಸಮೀಪ ಶಾಸಕರ ವಿಶೇಷ ಅನುದಾನದಡಿ ನಿರ್ಮಿಸಲಾದ ಮಳಿಗೆಗಳನ್ನು ಬೀದಿ ಬದಿ ವ್ಯಾಪಾರಿಗಳಿಗೆ ಚೀಟಿ ಎತ್ತುವ ಮೂಲಕ ಪಾರದರ್ಶಕವಾಗಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ಮಂಜುನಾಥ, ಮೇಯರ್ ಗಾದೆಪ್ಪ, ಸದಸ್ಯರಾದ ಗುಡಿಗಂಟಿ ಹನುಮಂತ, ಕುಬೇರಾ ಸೇರಿದಂತೆ ಇತರರು ಉಪಸ್ಥಿತರಿದ್ದರು.ಇದಾದ ನಂತರ 39ನೇ ವಾರ್ಡ್ನ ನೇತಾಜಿ ನಗರದಲ್ಲಿರುವ ಶ್ರೀ ಗಣೇಶ ದೇವಸ್ಥಾನ ಸಮೀಪ ಅಂದಾಜು 80.63 ಲಕ್ಷ ವೆಚ್ಚದಲ್ಲಿ ಒಳಚರಂಡಿ ದುರಸ್ತಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ಈ ವೇಳೆ ಪಿ. ಜಗನ್, ಮಾರೆಣ್ಣ, ಎರುಕುಲಸ್ವಾಮಿ, ಮಲ್ಲಿಕಾರ್ಜುನಸ್ವಾಮಿ, ಸೋಮಶೇಖರ್, ಸಿದ್ಧೇಶ್, ಸುಬ್ಬರಾಯುಡು, ನರೇಂದ್ರ ಸೇರಿದಂತೆ ಸ್ಥಳೀಯರು ಭಾಗವಹಿಸಿದ್ದರು.ಮುಂದೆ 36ನೇ ವಾರ್ಡ್ ವ್ಯಾಪ್ತಿಯ ಹಾವಂಭಾವಿ ಕಾಲುವೆ ಬಳಿ ರಸ್ತೆ ಅಭಿವೃದ್ಧಿ, ಮಳೆನೀರು ಚರಂಡಿ, ಒಳಚರಂಡಿ ಹಾಗೂ ಪೇವರ್ಸ್ ಅಳವಡಿಕೆ ಸೇರಿದಂತೆ ?2 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿದರು. ಇದೇ ಪ್ರದೇಶದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯೊಂದರ ಕೊಠಡಿ ನಿರ್ಮಾಣಕ್ಕೆ 16.5 ಲಕ್ಷ ವೆಚ್ಚದ ಕಾಮಗಾರಿಗೂ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಟಿ.ಎಂ.ಜಿ. ಲೋಕೇಶ್, ಗಂಗಪ್ಪ, ಗಂಗಾಧರ್, ಸೋಮು ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಶಾಲಾ ಸಿಬ್ಬಂದಿ ಹಾಜರಿದ್ದರು.ಇದಾದ ಬಳಿಕ ಗಡಿಗಿ ಚನ್ನಪ್ಪ ವೃತ್ತದಲ್ಲಿ ಸಂಚಾರ ಅಸ್ತವ್ಯಸ್ತತೆಯ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ, ಪಾಲಿಕೆ ಅಧಿಕಾರಿಗಳು ಮತ್ತು ಸಂಚಾರಿ ಪೊಲೀಸರಿಗೆ ಅಗತ್ಯ ಸೂಚನೆಗಳನ್ನು ನೀಡಿದರು.ಸಂಜೆಯ ವೇಳೆ ನಿರ್ಮಾಣ ಹಂತದಲ್ಲಿರುವ ಗುಗ್ಗರಹಟ್ಟಿಯ ಸೇತುವೆ ಹಾಗೂ ರಸ್ತೆ ಕಾಮಗಾರಿಗಳನ್ನು ವೀಕ್ಷಿಸಿ, ಅಧಿಕಾರಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಿದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 