ವಿವಿಧ ಗ್ರಾಮಗಳಲ್ಲಿ ಸಿಸಿ ರಸ್ತೆ ಕಾಮಗಾರಿಗಳಿಗೆ ಶಾಸಕ ರಾಜುಗೌಡ ಭೂಮಿ ಪೂಜೆ

ವಿವಿಧ ಗ್ರಾಮಗಳಲ್ಲಿ ಸಿಸಿ ರಸ್ತೆ ಕಾಮಗಾರಿಗಳಿಗೆ ಶಾಸಕ ರಾಜುಗೌಡ ಭೂಮಿ ಪೂಜೆ MLA Rajugowda performs Bhoomi Puja for CC road works in various villages

ದೇವರಹಿಪ್ಪರಗಿ 31 : ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದು, ಗ್ರಾಮಸ್ಥರ ಬೇಡಿಕೆಯಂತೆ ಹಂತ, ಹಂತವಾಗಿ ಅಗತ್ಯ ಮೂಲಸೌಕರ್ಯಗಳ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು  ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಹೇಳಿದರು.ಮತಕ್ಷೇತ್ರದ ಪಡಗಾನೂರ ತಾಂಡಾ,ಹರನಾಳ, ಹಿಟ್ನಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಒಟ್ಟು ? 2 ಕೋಟಿ ವೆಚ್ಚದ ಸಿ.ಸಿ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು,ಗ್ರಾಮೀಣ ಭಾಗದ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿ. ಜನರು ಎದುರಿಸುತ್ತಿರುವ ರಸ್ತೆ, ಸಿ ಸಿ ರಸ್ತೆ,ಒಳಚರಂಡಿ, ಶಿಕ್ಷಣ, ವಿದ್ಯುತ್, ನೀರಾವರಿ, ಆರೋಗ್ಯ, ಸಾರಿಗೆ, ಕುಡಿಯುವ ನೀರಿನ ಸಮಸ್ಯೆ ಹಾಗೂ ಸಂಪರ್ಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವುದು ನಮ್ಮ ಮುಖ್ಯ ಗುರಿ. ಯಾವುದೇ ಗ್ರಾಮವೂ ಅಭಿವೃದ್ಧಿಯಿಂದ ಹಿಂದೆ ಉಳಿಯಬಾರದು ಎಂಬ ಉದ್ದೇಶದಿಂದ ಈ ಕಾಮಗಾರಿಗಳನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ.,

ತಾಲೂಕಿನ ಪಡಗಾನೂರ ತಾಂಡಾ ಗ್ರಾಮದಲ್ಲಿ ಸುಮಾರು 50ಲಕ್ಷ,ಹರನಾಳ ಗ್ರಾಮದಲ್ಲಿ 50ಲಕ್ಷ ಹಾಗೂ ಹಿಟ್ನಳ್ಳಿ ಗ್ರಾಮದಲ್ಲಿ ಸುಮಾರು 100ಲಕ್ಷ ರೂ ವೆಚ್ಚದ ಅನುದಾನದಲ್ಲಿ ನಿರ್ಮಾಣವಾಗಲಿರುವ ಸಿ.ಸಿ.ರಸ್ತೆ ತಮ್ಮ ಅಧಿಕಾರದ ಅವಧಿಯಲ್ಲಿ ಗುಣಮಟ್ಟದ ವಿಚಾರದಲ್ಲಿ ರಾಜಿ ಇಲ್ಲ ಆದ್ದರಿಂದ ಕಾಮಗಾರಿಯಲ್ಲಿ ಉತ್ತಮ ಗುಣಮಟ್ಟವನ್ನು ಕಾಯ್ದುಕೊಳ್ಳಲು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.ವಿರೋಧ ಪಕ್ಷದ ಶಾಸಕನಾಗಿ ಯಾವುದೇ ರೀತಿಯ ರಾಜಕೀಯ ಮಾಡದೆ ನಿರಂತರವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದೇನೆ. ತಮ್ಮೆಲ್ಲರ ಸಹಕಾರದಿಂದ  ಕ್ಷೇತ್ರದ ಜನರ ನೀರೀಕ್ಷೆಗೆ ತಕ್ಕಂತೆ ಕೆಲಸ ಮಾಡಿಕೊಂಡು ಹೋಗುತ್ತಿದ್ದೇನೆ ಎಂದು ಹೇಳಿದರು.

ಮುಖಂಡರಾದ ಗುರುರಾಜ ಆಕಳವಾಡಿ,ಸಂಗನಗೌಡ ಬಿರಾದಾರ ಅವರು ಮಾತನಾಡಿ ಕಳೆದ 50 ವರ್ಷಗಳಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಣದ ಕುಗ್ರಾಮಗಳಿಗೂ ಶಾಸಕರು ಕೋಟಿ,ಕೋಟಿ ಅನುದಾನ ತಂದು ಅಭಿವೃದ್ಧಿಪಡಿಸಿದ್ದಾರೆ. ಬರುವಂತ ದಿನಗಳಲ್ಲಿ ನಾವೆಲ್ಲರೂ ಅವರಿಗೆ ಸಹಕಾರ ನೀಡೋಣ ಎಂದರು. ಇದೇ ವೇಳೆ ವಿವಿಧ ಗ್ರಾಮಗಳ ಗ್ರಾಮಸ್ಥರು ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಅವರಿಗೆ ಕೃತಜ್ಞತೆ ಸಲ್ಲಿಸಿ, ಅವರನ್ನು ಸತ್ಕರಿಸಿದರು.ಇದೇ ಸಂದರ್ಭದಲ್ಲಿ ಮಾಜಿ ಗ್ರಾಪಂ ಅಧ್ಯಕ್ಷ ಸುರೇಶ ರಾಠೋಡ, ಮುಖಂಡರುಗಳಾದ ಶಂಕರ ರಾಠೋಡ,ಶ್ರೀಶೈಲ ಮಳಜಿ,ನಿಂಗನಗೌಡ ಹಲಸಗುಂದ, ಸಂಗನಗೌಡ ಬಿರಾದಾರ, ಸಿದ್ದನಗೌಡ ಜಲಪೂರ, ಪರಶುರಾಮ ವಡ್ಡರ,ಶರಣು ತುಂಬಗಿ ಸೇರಿದಂತೆ ಗ್ರಾಮದ ಪ್ರಮುಖರು, ಗಣ್ಯರು ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.