ಸಿಂಧಗಿ

ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗೆ ಶಾಸಕ ರಮೇಶ ಭೂಸನೂರ ಚಾಲನೆ

ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗೆ ಶಾಸಕ ರಮೇಶ ಭೂಸನೂರ ಚಾಲನೆ

ಸಿಂದಗಿ: ಪ್ರಧಾನಿ ನರೇಂದ್ರ ಮೋದಿ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಜಲ ಜೀವನ್ ಮಿಷನ್ ರಾಜ್ಯದಲ್ಲಿ ವೇಗ ಪಡೆದುಕೊಂಡಿದೆ. ಗ್ರಾಮೀಣ ಭಾಗದ ಮನೆ ಮನೆಗೆ ನಲ್ಲಿ ಮೂಲಕ ನೀರು ಪೂರೈಸುವ ಜೆಜೆಎಂ ಯೋಜನೆ ಅನುಷ್ಠಾನಕ್ಕೆ ಒತ್ತು ನೀಡಿದೆ. 2023ರ ಅಂತ್ಯದೊಳಗೆ ಶೇ.100 ಗುರಿ ಸಾಧನೆ ಮಾಡಲಾಗುವುದು ಎಂದು ಶಾಸಕ ರಮೇಶ ಭೂಸನೂರ ಹೇಳಿದರು. 

ತಾಲೂಕಿನ ಕರವಿನಾಳ ತಾಂಡಾದಲ್ಲಿ ಶನಿವಾರ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. 

ಗ್ರಾಮೀಣ ಭಾಗದ ಪ್ರತಿ ಮನೆಗೂ ಜಲಮೂಲದಿಂದ ಶುದ್ಧ ಕುಡಿಯುವ ನೀರು ಪೂರೈಸುವ ಹರ್ ಘರ್ ಜಲ್ ಘೋಷಣೆಯಂತೆ ರೂಪಿಸಲಾದ ಮಿಷನ್ ಗುರಿ ಸಾಧನೆ ಕ್ಷೇತ್ರದಲ್ಲಿ ಸಾಗುತ್ತಿದೆ. ಈ ಗುರಿ ಸಾಧನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಆದ್ಯತೆ ಮೇಲೆ ಕೈಗೆತ್ತಿಕೊಂಡಿದ್ದು, ರಾಜ್ಯದ ಗ್ರಾಮೀಣ ಭಾಗದ ಮನೆಗಳಿಗೆ ಈವರೆಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸುವಲ್ಲಿ ರಾಜ್ಯ ಸರಕಾರ ಯಶಸ್ವಿಯಾಗಿದೆ ಎಂದು ಹೇಳಿದರು. 

ಶೇ. 100ರಷ್ಟು ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕವನ್ನು ಒದಗಿಸುವ ಮತ್ತು ಒಟ್ಟಾರೆ ಕುಡಿಯುವ ನೀರಿನ ಭದ್ರತೆಯನ್ನು ಸಾಧಿಸುವ ಗುರಿಯನ್ನು ಜಲ ಜೀವನ್ ಮಿಷನ್ ಯೋಜನೆ ಹೊಂದಿದೆ. ಕ್ಷೇತ್ರದಲ್ಲಿ ಜಲ ಜೀವನ್ ಮಿಷನ್ ಯೋಜನೆಯ ಗುರಿಯನ್ನು ಸಾಧಿಸುತ್ತೇವೆ ಎಂದು ಹೇಳಿದರು. 

ಸಿಂದಗಿ ಬಿಜೆಪಿ ಮಂಡಳ ಅಧ್ಯಕ್ಷ ಈರಣ್ಣ ರಾವೂರ, ಸಂತೋಷ ಪಾಟೀಲ ಡಂಬಳ, ಸಿದ್ದು ಬುಳ್ಳಾ, ಪ್ರಭುಗೌಡ ಪಾಟೀಲ ಡಂಬಳ, ಗ್ರಾಪಂ ಸದಸ್ಯರಾದ ಉಮಾಜಿ ಚವ್ಹಾಣ, ಹಿರಾಮನ್ ಚವ್ಹಾಣ, ತಾಪಂ ಮಾಜಿ ಸದಸ್ಯ ಶ್ರೀಶೈಲ ಚಳ್ಳಗಿ, ಸೈಪನ್‌ಸಾಬ ಕೋರವಾರ, ಸಂತೋಷ ಮಣಗಿರಿ, ಸಂಜು ರಾಠೋಡ, ಸಲಿಮ ದೊಡಮನಿ, ಸಿದ್ರಾಯ ಪೂಜಾರಿ, ಹುಸೇನ್‌ಸಾಬ ಅಡಾಡಿ ಸೇರಿದಂತೆ ತಾಂಡಾದ ನಿವಾಸಿಗಳು ಇದ್ದರು. 


ಸುದ್ದಿ ಓದಿ