ಇಂಗ್ಲೆಂಡ್‌ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿ : ವಿದೇಶ ಪ್ರವಾಸದಲ್ಲಿರುವ ಶಾಸಕ ರಮೇಶ್ ಜಾರಕಿಹೊಳಿ ಅವರು ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಭೇಟಿ ನೀಡಿ, ಮಹರ್ಷಿ ಶ್ರೀ ವಾಲ್ಮೀಕಿಯ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಆಶ್ರಮದ ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಕಾರ್ಯಗಳನ್ನು ವೀಕ್ಷಿಸಿದ ರಮೇಶ್ ಜಾರಕಿಹೊಳಿ ಅವರು, ವಿದೇಶದ ನೆಲದಲ್ಲಿಯೂ ಸನಾತನ ಸಂಸ್ಕೃತಿ, ಧಾರ್ಮಿಕ ಪರಂಪರೆ ಮತ್ತು ಭಾರತೀಯ ಮೌಲ್ಯಗಳನ್ನು ಜೀವಂತವಾಗಿರಿಸುವ ಆಶ್ರಮದ ಕಾರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದರು.
ಮಹರ್ಷಿ ಶ್ರೀ ವಾಲ್ಮೀಕಿಯವರ ಆದರ್ಶಗಳು ಹಾಗೂ ರಾಮಾಯಣದ ಸಂದೇಶವನ್ನು ಜಗತ್ತಿನಾದ್ಯಂತ ಪಸರಿಸುವಲ್ಲಿ ಆಶ್ರಮದ ಸೇವೆ ಮಹತ್ವದ್ದಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಡಾ. ಕಿರಣಕುಮಾರ ಹಿರೇಹಾಳ್, ರಾಜೀವ ಮೆತ್ರಿ, ಕೃಷ್ಣ ಪೂಜಾರ ಹಾಗೂ ವಿಜಯ ಮ್ಯಾಗೇರಿ ಉಪಸ್ಥಿತರಿದ್ದರು.