ಲಂಡನ್‌ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ

ಲಂಡನ್‌ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ

ಬೆಳಗಾವಿ : ವಿದೇಶ ಪ್ರವಾಸದಲ್ಲಿರುವ  ಮಾಜಿ ಸಚಿವ ಹಾಗೂ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ಲಂಡನ್‌ನಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ವಾಸವಿದ್ದ ಸ್ಮಾರಕ ಮನೆಗೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು.


    ಲಂಡನ್‌ನಲ್ಲಿರುವ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಸ್ಮಾರಕ ಮನೆಯನ್ನು ಸಂದರ್ಶಿಸಿದ ರಮೇಶ್ ಜಾರಕಿಹೊಳಿ ಅವರು, ಅಂಬೇಡ್ಕರ್ ಅವರ ಜೀವನ, ಚಿಂತನೆ ಹಾಗೂ ಸಾಮಾಜಿಕ ನ್ಯಾಯದ ಹೋರಾಟವನ್ನು ಸ್ಮರಿಸಿದರು.

   ಸಮಾಜದ ಹಿಂದುಳಿದ ಹಾಗೂ ಶೋಷಿತ ವರ್ಗಗಳ ಹಕ್ಕುಗಳಿಗಾಗಿ ಹೋರಾಡಿದ ಡಾ. ಅಂಬೇಡ್ಕರ್ ಅವರು ದೇಶದ ಕೋಟ್ಯಂತರ ಜನರಿಗೆ ಪ್ರೇರಣೆಯಾಗಿದ್ದಾರೆ. ಅವರ ಸ್ಮಾರಕ ಮನೆಗೆ ಭೇಟಿ ನೀಡಿರುವುದು ಗೌರವದ ಕ್ಷಣವಾಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು. 

   ಈ ಸಂದರ್ಭದಲ್ಲಿ ರಾಜೀವ್ ಕೆ. ಮೆತ್ರಿ, ಮಹೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುದ್ದಿ ಓದಿ