ಯೋಗ ಶಿಬಿರದ ಯಶಸ್ಸಿಗೆ ಸಹಕರಿಸಿದ ಶಾಸಕ ಸವದಿಗೆ ಸನ್ಮಾನ
MLA Savadi honored for contributing to the success of the yoga camp
ಅಥಣಿ 29: ಅಂತಾರಾಷ್ಟ್ರೀಯ 11 ನೇ ಯೋಗ ದಿನದ ಅಂಗವಾಗಿ ಪತಂಜಲಿ ಯೋಗ ಪೀಠ, ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲಾ ಕಾಲೇಜುಗಳ ಸಹಯೋಗದಲ್ಲಿ ಸ್ಥಳೀಯ ಕೆ.ಎಲ್.ಇ ಮೈದಾನದಲ್ಲಿ ಆಯೋಜಿಸಿದ್ದ ಯೋಗ, ಪ್ರಾಣಾಯಾಮ, ಧ್ಯಾನ ಶಿಬಿರದ ಯಶಸ್ಸಿಗೆ ಶ್ರಮಿಸಿದ ಮಾಜಿ ಉಪ ಮುಖ್ಯಮಂತ್ರಿ, ಶಾಸಕ ಲಕ್ಷ್ಮಣ ಸವದಿ ಇವರಿಗೆ ಪತಂಜಲಿ ಯೋಗ ಪೀಠ ಹರಿದ್ವಾರ ಅಥಣಿ ಶಾಖೆಯ ಪದಾಧಿಕಾರಿಗಳು ಸತ್ಕರಿಸಿ ಅಭಿನಂದನಾ ಪತ್ರ ನೀಡಿ ಗೌರವಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ, ಯೋಗ, ಧ್ಯಾನ, ಪ್ರಾಣಾಯಾಮ ಶಿಬಿರದ ಯಶಸ್ಸಿಗೆ ನಾನೊಬ್ಬನೇ ಕಾರಣನಲ್ಲ ನನ್ನ ಜೊತೆಗೆ ಕಾರ್ಯನಿರ್ವಹಿಸಿದ ಪತಂಜಲಿ ಯೋಗ ಪೀಠದ ಪದಾಧಿಕಾರಿಗಳು, ಸರಕಾರಿ ಅಧಿಕಾರಿಗಳು, ಶಿಕ್ಷಕರು, ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರೆಲ್ಲರೂ ಕಾರಣ ಎಂದ ಅವರು ಅರಣ್ಯ ಇಲಾಖೆಗೆ ಸೇರಿದ ಟ್ರೀ ಪಾರ್ಕನಲ್ಲಿ ಈಗಾಗಲೇ ಯೋಗ ಕಟ್ಟೆ ನಿರ್ಮಿಸಿದ್ದು, ಮುಂದಿನ ದಿನಗಳಲ್ಲಿ ಮೇಲ್ಛಾವಣಿಗೆ ಗ್ಲಾಸ್ ಅಳವಡಿಕೆಗೆ ಯೋಜನೆ ರೂಪಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಪತಂಜಲಿ ಯೋಗ ಪೀಠದ ಶಿವಾನಂದ ಬುರ್ಲಿ, ಸುರೇಶ್ ಚಿಕ್ಕಟ್ಟಿ, ರಾಮಣ್ಣ ದರಿಗೌಡರ, ಎಸ್ ಕೆ ಹೊಳೆಪ್ಪನವರ್, ಸದಾಶಿವ್ ಮುಡಗೌಡರ, ಮಹೇಶ್ ಮಮದಾಪುರ್, ದೇವೇಂದ್ರ ಬಿಸಾಗರ್, ಎಸ್. ಎಸ್ ಗೊರಜನಾಳ, ಅಪ್ಪಾಸಾಹೇಬ ತಂಬಾಟ್, ಎಸ್. ಎ. ಹೊನಗೌಡರ್, ವೆಂಕಟೇಶ ದೇಶಪಾಂಡೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 