ಮಹಲಿಂಗಪುರ

ತೇರದಾಳ ಕ್ಷೇತ್ರದಲ್ಲಿ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಶಾಸಕ ಸವದಿ ಚಾಲನೆ

ತೇರದಾಳ ಕ್ಷೇತ್ರದಲ್ಲಿ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಶಾಸಕ ಸವದಿ ಚಾಲನೆ

ಲೋಕದರ್ಶನ ವರದಿ 

ಮಹಾಲಿಂಗಪುರ 30 :  ತೇರದಾಳ ವಿಧಾನಸಭಾ ಕ್ಷೇತ್ರದಲ್ಲಿ ಗ್ರಾಮೀಣ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಸಿದ್ದು ಸವದಿ ಹೇಳಿದರು. ನಗರ ವಾರ್ಡ್‌ 18ರ ಸೈದಾಪುರ ತೋಟದ ರಸ್ತೆಯ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಚಾಲನೆ ನೀಡಿದರು.  

ರಸ್ತೆ ನಿರ್ಮಾಣ ಪೂರ್ಣಗೊಂಡ ಬಳಿಕ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸುಲಭವಾಗಿ ಸಾಗಿಸಲು ಅನುಕೂಲವಾಗಲಿದೆ ಎಂದು ಅವರು ಹೇಳಿದರು. ಮೂಲಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರ ವಿಶೇಷ ಆದ್ಯತೆ ನೀಡುತ್ತಿದ್ದು, ಗ್ರಾಮೀಣ ಸಂಪರ್ಕ ವ್ಯವಸ್ಥೆಯನ್ನು ಬಲಪಡಿಸಲಾಗುತ್ತಿದೆ ಎಂದು ತಿಳಿಸಿದರು.  

ಸುಮಾರು 5 ಲಕ್ಷ ವೆಚ್ಚದ ಈ ರಸ್ತೆ ಕಾಮಗಾರಿ ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಕೈಗೊಳ್ಳಲಾಗುತ್ತಿದ್ದು, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ಮೂಲಕ ಅನುಷ್ಠಾನಗೊಳ್ಳಲಿದೆ.  ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ರೈತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. 


ಸುದ್ದಿ ಓದಿ