ಬಸ್ ಡಿಪೋ ಪ್ರಾರಂಭೋತ್ಸವಕ್ಕೆ ಶಾಸಕ ಶಿವರಾಮ ಹೆಬ್ಬಾರ ಚಾಲನೆ
ಮುಂಡಗೋಡ, 17 :ಪಟ್ಟಣದ ಹುಬ್ಬಳ್ಳಿ ರಸ್ತೆಯಲ್ಲಿರುವ ವಾಕರಸಾ ಸಂಸ್ಥೆಯ ಘಟಕದ ಸಾರಿಗೆ ಕಾರ್ಯಾಚರಣೆ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಬಸ್ ಡಿಪೋದಲ್ಲಿ ಬಸ್ಗಳಿಗೆ ಪೂಜೆ ನೆರವೇರಿಸಿ ಬಸ್ಗಳ ಕಾರ್ಯಾರಂಭಕ್ಕೆ ಚಾಲನೆ ನೀಡುವ ಮೂಲಕ ಪೂರೈಸಿದ್ದಾರೆ.
ಚಾಲನೆ ನೀಡಿದ ಶಾಸಕ ಶಿವರಾಮ ಹೆಬ್ಬಾರ್ ಅಣತಿ ದೂರ ಬಸ್ನಲ್ಲಿ ಪ್ರಯಾಣಿಸಿದರು. ಬಸ್ ಡಿಪೋದಲ್ಲಿ ಗಿಡಕ್ಕೆ ನೀರುಣಿಸುವ ಮೂಲಕವಾಗಿ ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷರಾದ ಸತೀಶ್ ನಾಯ್ಕ,ಮಾಜಿ ಶಾಸಕರಾದ ವಿ.ಎಸ್.ಪಾಟೀಲ್, ಕೆ.ಪಿ.ಸಿ.ಸಿ ಸದಸ್ಯರಾದ ವಿವೇಕ್ ಹೆಬ್ಬಾರ್, ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಕೃಷ್ಣ ಹಿರೇಹಳ್ಳಿ, ನಿಕಟಪೂರ್ವ ಅಧ್ಯಕ್ಷರಾದ ಜ್ಞಾನೇಶ್ವರ ಗುಡಿಯಾಳ, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ರವಿಗೌಡ ಪಾಟೀಲ್, ತಾಲೂಕಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಆರ್.ಆರಿ್ಹರೇಮಠ, ಪಟ್ಟಣ ಪಂಚಾಯತ ಅಧ್ಯಕ್ಷರು, ಜಯಸುಧಾ ಭೋವಿ, ಮುಂಡಗೋಡ ಡಿಪೋ ವ್ಯವಸ್ಥಾಪಕ ರಾಜಶೇಖರ ಧನ್ಯಾಳ ಹಾಗೂ ಯಲ್ಲಾಪುರ ಡಿಪೋ ವ್ಯವಸ್ಥಾಪಕ ಸಂತೋಷ ವರ್ಣೇಕರ ಮುಂಡಗೋಡ ಬಸ್ ಕಂಟ್ರೋಲರ್ ಮುತ್ತುರಾಜ ದೊಡ್ಡನಿ ಸೇರಿದಂತೆ ಬಸ್ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಉಪಸ್ಥಿತರಿದ್ದರು.