13 ಲಕ್ಷ ರೂ. ವೆಚ್ಚದಲ್ಲಿ ಸಿಸಿರಸ್ತೆ ನಿರ್ಮಾಣಕ್ಕೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ
ಹಾನಗಲ್ 08: ತಾಲೂಕಿನ ಗುರುರಾಯಪಟ್ಟಣ ಗ್ರಾಮದಲ್ಲಿ 2024-25 ನೇ ಸಾಲಿನ ಪ್ರಗತಿ ಕಾಲೋನಿ ಯೋಜನೆಯಡಿ 13 ಲಕ್ಷ ರೂ. ವೆಚ್ಚದಲ್ಲಿ ಸಿಸಿರಸ್ತೆ ನಿರ್ಮಾಣಕ್ಕೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.
ಗ್ರಾಮದ ಚಂದ್ರು ಲಮಾಣಿ ಅವರ ಮನೆಯಿಂದ ಕೇಶವ ನಾಯಕ ಅವರ ಮನೆವರೆಗೆ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ ಶಾಸಕ ಮಾನೆ, ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 50 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿದ್ದಾರೆ. ಅನುದಾನದಲ್ಲಿ ಬಹುತೇಕ ಪ್ರತಿಯೊಂದು ಗ್ರಾಮಗಳಲ್ಲಿಯೂ ಸಹ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಪ್ರತಿ ಗ್ರಾಮ ಪಂಚಾಯಿತಿಗೆ 70 ರಿಂದ 80 ಲಕ್ಷ ರೂ. ಅನುದಾನ ಒದಗಿಸಲಾಗಿದೆ. ಅನುದಾನ ಲಭ್ಯತೆ ಆಧರಿಸಿ ಹಂತ, ಹಂತವಾಗಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಕಾಳಜಿ ವಹಿಸಿದ್ದಾಗಿ ತಿಳಿಸಿದರು.
ಜಿಪಂ ಮಾಜಿ ಸದಸ್ಯ ಟಾಕನಗೌಡ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮರಗಡಿ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕಾಧ್ಯಕ್ಷ ವಿಜಯಕುಮಾರ ದೊಡ್ಡಮನಿ, ತಾಪಂ ಮಾಜಿ ಅಧ್ಯಕ್ಷ ಎಲ್.ಕೆ.ಶೇಷಗಿರಿ, ಮಾಜಿ ಸದಸ್ಯ ಮೆಹಬೂಬಅಲಿ ಬ್ಯಾಡಗಿ, ಕೆಎಂಎಫ್ ನಿರ್ದೇಶಕ ಚಂದ್ರ್ಪ ಜಾಲಗಾರ, ಪ್ರಮುಖರಾದ ಸುನೀಲ್ ಚವ್ಹಾಣ, ಈರಣ್ಣ ಬೈಲವಾಳ, ರಾಜೇಶ ಚವ್ಹಾಣ, ಲಕ್ಷ್ಮಣ ಲಮಾಣಿ, ಸಂಜು ಲಮಾಣಿ, ಶಿವಾಜಿ ಲಮಾಣಿ, ಅಜಿತ್ ಲಮಾಣಿ, ನಾಗರಾಜ್ ಚವ್ಹಾಣ, ರಾಮಣ್ಣ ಪೂಜಾರ, ಹನುಮಂತಪ್ಪ ಹುರುಳಿಕುಪ್ಪಿ, ರಾಜಣ್ಣ ಪುರದವರ, ಪರಮೇಶ ಲಮಾಣಿ, ರಾಮಣ್ಣ ಪೂಜಾರ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಜಿ.ಬಿ.ಹಿರೇಮಠ ಸೇರಿದಂತೆ ಅನೇಕರಿದ್ದರು.