ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ವೈದ್ಯ ಭೂಮಿ ಪೂಜೆ
MLA Vaidya Bhoomi Pooja for CC road construction work
ಯರಗಟ್ಟಿ, 23 : ಈ ಭಾಗದ ಜನರ ಸುಗಮವಾಗಿ ಸಂಚರಿಸಲು ಹಾಗೂ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಸಮೀಪದ ತಾವಲಗೇರಿ ಗ್ರಾಮದಲ್ಲಿ ಸುಮಾರು 20 ಲಕ್ಷ ರೂ. ಮೊತ್ತದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ ಯರಗಟ್ಟಿ ಭಾಗದ ಜನರಿಗೆ ಸಂಪೂರ್ಣ ತಾಲೂಕಾ ಮಟ್ಟದ ಕಚೇರಿಗಳ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಕಾಂಗ್ರೇಸ್ ಪ್ರಕಾಶ ವಾಲಿ ಮಾತನಾಡಿ, ಸರ್ಕಾರ ಗ್ಯಾರಂಟಿ ಯೋಜನೆಗಳ ಜತೆಗೆ ಅಭಿವೃದ್ಧಿ ಕಾರ್ಯ ಮಾಡಲಾಗುತ್ತಿದ್ದು ಗುಣಮಟ್ಟದ ಜತೆಗೆ ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣ ಗೊಳಿಸಿ ಎಂದು ಗುತ್ತಿಗೆದಾರರಿಗೆ ಸೂಚಿಸಿದರು. ಶಾಸಕ ವಿಶ್ವಾಸ ವೈದ್ಯ ಅವರನ್ನು ಗ್ರಾಮಸ್ಥರು, ಕಾರ್ಯಕರ್ತರು ಸನ್ಮಾನಿಸಿದರು.
ಗ್ರಾ. ಪಂ. ಅಧ್ಯಕ್ಷ ಲಕ್ಕಪ್ಪ ಸನ್ನಿಂಗನ್ನವರ, ಮುಖಂಡ ಎಪಿಎಂಸಿ ಅಧ್ಯಕ್ಷ ನೀಲಕಂಠ ಸಿದ್ದಬಸನ್ನವರ, ಬಂಗಾರೆಪ್ಪ ಹರಳಿ, ದ್ಯಾಮಣ್ಣಾ ಬಂಡಿವಡ್ಡರ, ಸಿದ್ದಪ್ಪ ಬುರ್ಲಿ, ಚಿಂತಾಮಣಿ ಬಡ್ಡಿವಡ್ಡರ, ಭರಮಣ್ಣಾ ಹಕ್ಕಿ, ಭರಮಪ್ಪ ಕುರಿ, ಈಶ್ವರ ತಳನಟ್ಟಿ, ಪ್ರಕಾಶ ಬಂಡಿವಡ್ಡರ ಸೇರಿದಂತೆ ಕಾರ್ಯಕರ್ತರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 