ಡ್ರಗ್ಸ್‌ ವ್ಯಸನ ಮುಕ್ತ ಜಾಗೃತಿ ಅಭಿಯಾನಕ್ಕೆ ಶಾಸಕ ವೈದ್ಯ ಚಾಲನೆ

ಡ್ರಗ್ಸ್‌ ವ್ಯಸನ ಮುಕ್ತ ಜಾಗೃತಿ ಅಭಿಯಾನಕ್ಕೆ ಶಾಸಕ ವೈದ್ಯ ಚಾಲನೆ  MLA Vaidya launches drug-free awareness campaign

      ಸವದತ್ತಿ 29: ಯಡ್ರಾವಿಯ  ಆದರ್ಶ ಶಾಲೆಯ ಆವರಣದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಆಪರೇಶನ್ ರೈಸ್ ಹಾಗೂ ಬೇಡ ಬ್ರೋ ಡ್ರಗ್ಸ್‌ ವ್ಯಸನ ಮುಕ್ತ ಜಾಗೃತಿ ಅಭಿಯಾನಕ್ಕೆ ಶಾಸಕ ವಿಶ್ವಾಸ ವೈದ್ಯ ಚಾಲನೆ ನೀಡಿದರು.   

     ಬಳಿಕ ಮಾತನಾಡಿದ ಅವರು, ಇಂದಿನ ಯುವಜನತೆ ಹಾಗೂ ವಿದ್ಯಾರ್ಥಿ ಸಮುದಾಯವನ್ನು ಮಾದಕ ದ್ರವ್ಯಗಳ ದುರಭ್ಯಾಸದಿಂದ ಸಂಪೂರ್ಣವಾಗಿ ದೂರವಿಟ್ಟು, ಅವರಲ್ಲಿ ಆರೋಗ್ಯಕರ ಜೀವನಶೈಲಿಯ ಕುರಿತು ಜಾಗೃತಿ ಮೂಡಿಸುವ ಸದುದ್ದೇಶದಿಂದ ಈ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.  

        ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಕೆಟ್ಟ ದುಶ್ಚಟಗಳಿಗೆ ಬಲಿಯಾಗಬಾರದು. ಉತ್ತಮ ಶಿಕ್ಷಣವನ್ನು ಪಡೆದುಕೊಂಡು ದೇಶ ಹಾಗೂ ಸಮಾಜದ ಉಜ್ವಲ ಸತ್ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ಕರೆ ನೀಡಿದರು.  

     ಇದೇ ತಾಲೂಕಿನಲ್ಲಿ ವಿದ್ಯಾಭ್ಯಾಸ ಮಾಡಿ ಸರ್ಕಾರಿ ನೌಕರಿಯನ್ನು ಪಡೆದಿರುವ ರಾಮದುರ್ಗ ಡಿವೈಎಸ್ಪಿ ಚಿದಂಬರ ಮಡಿವಾಳರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ನುಡಿಗಳನ್ನಾಡಿ ಕಿವಿಮಾತು ಹೇಳಿದರು.  

       ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ, ಪೌರಾಯುಕ್ತ ಸಂಗನಬಸಯ್ಯ ಗದಗಿನಮಠ, ಪಿಐ ಸುರೇಶ ಬೆಂಡೆಗುಂಬಳ, ಅಬಕಾರಿ ಇಲಾಖೆ ದಾವಲ ಶಿಂದೋಗಿ,ಸಿಡಿಒ ಅಮೃತ ಸಾಣಿಕೊಪ್ಪ, ಎಪಿಎಂಸಿ ಅಧ್ಯಕ್ಷ ಚಂದ್ರು ಜಂಬ್ರಿ, ಪ್ರಭು ಪ್ರಭುನವರ, ಸುರೇಶ್ ಕಾಳಪ್ಪನವರ ಹಾಗೂ ಶಾಲಾ ವಿದ್ಯಾರ್ಥಿಗಳು ಇದ್ದರು.