ಏರೇಕಟ್ಟೆ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವಿರೂಪಾಕ್ಷಪ್ಪ ಪರಿಶೀಲನೆ
ಲೋಕದರ್ಶನವರದಿ
ಬ್ಯಾಡಗಿ೨೦: ಉದ್ಯೋಗ ಖಾತ್ರಿ ಯೋಜನೆಯಡಿ ತಾಲೂಕಿನಲ್ಲಿ ಸಾವಿರಾರು ಮಂದಿಗೆ ಕೂಲಿ ಕೆಲಸ ನೀಡಲು ಸಾಧ್ಯವಾಗಿದ್ದು, ಕೂಲಿ ಕೆಲಸ ಮಾಡಲು ಮುಂದೆ ಬರುವ ಪ್ರತಿಯೊಬ್ಬರಿಗೂ ತಕ್ಷಣ ಜಾಬ್ ಕಾಡರ್್ ನೀಡಲಾಗುವುದು ಎಂದು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ತಿಳಿಸಿದರು.
ಮಂಗಳವಾರ ತಾಲೂಕಿನ ಕುಮ್ಮೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕಾಸಂಬಿ ಗ್ರಾಮಕ್ಕೆ ಭೇಟಿ ನೀಡಿ ಉದ್ಯೋಗ ಖಾತ್ರಿ ಯೋಜನೆಯಡಿ 10 ಲಕ್ಷ ರೂಗಳ ವೆಚ್ಚದಲ್ಲಿ ಕೈಗೊಂಡಿರುವ ಏರೇಕಟ್ಟೆ ಕೆರೆ ಅಭಿವೃದ್ಧಿ ಕಾಮಗಾರಿಯ ಪರಿಶೀಲನೆ ನಡೆಸಿ ಮಾತನಾಡಿದ ಅವರು ನರೇಗಾ ಯೋಜನೆಯಡಿ ಪ್ರತಿಯೊಂದು ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕೆಲಸವನ್ನು ನಿಗದಿಪಡಿಸಲಾಗಿದೆ. ಅಂತರ್ಜಲ ಚೇತನ ಯೋಜನೆಯಡಿ ವಿವಿಧ ಕಾಮಗಾರಿಗಳನ್ನು ಗುರುತಿಸಲಾಗಿದ್ದು, ವ್ಯವಸ್ಥಿತವಾಗಿ ಅನುಷ್ಟಾನಗೊಳಿಸಲು, ಕೆಲಸದ ಸ್ಥಳದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಮಾತ್ರವಲ್ಲದೆ ಕೂಲಿ ಕೆಲಸದವರಿಗೆ ಕುಡಿಯುವ ನೀರು ಇತ್ಯಾದಿ ಮೂಲಸೌಲಭ್ಯಗಳನ್ನು ಸಹ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಅಲ್ಲದೇ ಗ್ರಾಮೀಣ ಭಾಗದ ನಿರುದ್ಯೋಗಿ ಜನರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಕಲ್ಪಿಸಬೇಕು. ಇದರಿಂದ ಈ ಸಂಕಷ್ಟಮಯ ಸಂದರ್ಭದಲ್ಲಿ ಆಥರ್ಿಕ ಪುನಶ್ಚೇತನ ಹೊಂದಲು ಸಾಧ್ಯವಾಗಲಿದೆ.
ನಗರ ಪ್ರದೇಶಗಳಿಂದ ಗ್ರಾಮೀಣ ಪ್ರದೇಶಗಳಿಗೆ ಲಾಕ್ಡೌನ್ ಸಂದರ್ಭದಲ್ಲಿ ವಲಸೆ ಬಂದಿರುವವರು, ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ಬಯಸಿ ಅಜರ್ಿ ಸಲ್ಲಿಸಿದರೆ ತಕ್ಷಣ ಜಾಬ್ ಕಾಡರ್್ ನೀಡಬೇಕು. ಉದ್ಯೋಗ ಖಾತ್ರಿ ಯೋಜನೆ ಅನುಷ್ಟಾನದಲ್ಲಿ ಯಾವುದೇ ಕರ್ತವ್ಯ ಲೋಪವನ್ನು ಸಹಿಸಲು ಸಾಧ್ಯವಿಲ್ಲ. ಉದ್ಯೋಗ ಖಾತ್ರಿ ಕಾಮಗಾರಿಗಳ ಅನುಷ್ಟಾನದ ಮೇಲೆ ಸಮರ್ಪಕವಾಗಿ ನಿಗಾ ವಹಿಸಬೇಕು ಎಂದು ಹೇಳಿದರು.
ತಾ ಪಂ. ಕಾರ್ಯ ನಿವರ್ಾಹಕ ಅಧಿಕಾರಿ ಅಬಿದ್ ಗದ್ಯಾಳ ಮಾತನಾಡಿ, ಸುಮಾರು ನಲ್ವತ್ತು ಎಕರೆ ವಿಸ್ತೀರ್ಣವುಳ್ಳ ಕಾಸಂಬಿ ಗ್ರಾಮದ ಏರೇಕಟ್ಟೆ ಕೆರೆ ಅಭಿವೃದ್ಧಿ ಕಾಮಗಾರಿಯಲ್ಲಿ ಕಳೆದ ಒಂದು ವಾರದಿಂದ 250 ಕ್ಕೂ ಕೂಲಿ ಕಾಮರ್ಿಕರು ಕೆಲಸ ಮಾಡುತ್ತಿದ್ದಾರೆ. ಈ ಕೆರೆಯ ಅಭಿವೃದ್ಧಿಗಾಗಿ 10 ಲಕ್ಷ ರೂಗಳ ವೆಚ್ಚದಲ್ಲಿ ಕ್ರಿಯಾ ಯೋಜನೆಯನ್ನು ತಯಾರಿಸಲಾಗಿದೆ ಎಂದು ಶಾಸಕರ ಗಮನಕ್ಕೆ ತಂದರು.
ಈ ಸಂದರ್ಭದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ರವೀಂದ್ರ ಪಟ್ಟಣಶೆಟ್ಟಿ, ಉಮೇಶ ರಟ್ಟಿಹಳ್ಳಿ, ಗ್ರಾಮೀಣ ಉದ್ಯೋಗದ ಸಹಾಯಕ ನಿದರ್ೆಶಕ ಪರಶುರಾಮ ಪೂಜಾರ, ಪಿಡಿಓ ನೀಲಪ್ಪ ಕಜ್ಜರಿ, ಕಾರ್ಯದಶರ್ಿ ಈರಣ್ಣ ತಳವಾರ, ಶಾಸಕರ ಆಪ್ತ ಸಹಾಯಕ ಬಸವರಾಜ ಕುಲ್ಕಣರ್ಿ, ನರೇಗಾ ತಾಂತ್ರಿಕ ಸಹಾಯಕ ಶಾನವಾಜ್ ಚಿಣಗಿ ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 