ಶಾಸಕ ವಿಶ್ವಾಸ ವೈದ್ಯರಿಂದ ಕೊಳವೆ ಬಾವಿ ಲೋಕಾರ್ಪಣೆ
ಲೋಕದರ್ಶನ ವರದಿ
ಯರಗಟ್ಟಿ 10: ಸಮೀಪದ ಮುಗಳಿಹಾಳ ಗ್ರಾಮದಲ್ಲಿ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕುಡಿಯುವ ನೀರು ಯೋಜನೆ ಅಡಿಯಲ್ಲಿ ಕೊಳವೆ ಬಾವಿ ಕೊರೆಸಲಾಗಿತ್ತು. ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಶಾಸಕರಾದ ವಿಶ್ವಾಸ ವೈದ್ಯ ಅವರು ಕೊಳವೆ ಬಾವಿಯನ್ನು ಲೋಕಾರ್ಪಣೆಗೊಳಿಸಿದರು.
ಪ್ರಕಾಶ ವಾಲಿ, ಶಂಕರ ಇಟ್ನಾಳ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮತ್ತು ಗ್ರಾಮದ ಹಿರಿಯರು, ಯುವಕರು, ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಸರ್ವ ಸದಸ್ಯರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು