ಬೆಳಗಾವಿ

ಶಾಸಕ ವಿಶ್ವಾಸ ವೈದ್ಯ 45ನೇ ಹುಟ್ಟುಹಬ್ಬ ಆಚರಣೆ

ಶಾಸಕ ವಿಶ್ವಾಸ ವೈದ್ಯ 45ನೇ ಹುಟ್ಟುಹಬ್ಬ ಆಚರಣೆ


ಸವದತ್ತಿ : ಶಾಸಕ ವಿಶ್ವಾಸ ವೈದ್ಯ ಅವರು ತಮ್ಮ 45ನೇ ಹುಟ್ಟುಹಬ್ಬವನ್ನು ಅತ್ಯಂತ ಸರಳ ಹಾಗೂ ಸಡಗರದಿಂದ ಆಚರಿಸಿಕೊಂಡರು. ಈ ವಿಶೇಷ ಸಂದರ್ಭದಲ್ಲಿ ಕ್ಷೇತ್ರದ ನಾನಾ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಸಾರ್ವಜನಿಕರು, ಅಭಿಮಾನಿಗಳು ಹಾಗೂ ಯುವಕರು ಶಾಸಕರ ಗೃಹ ಕಚೇರಿಗೆ ಭೇಟಿ ನೀಡಿ, ಭವ್ಯ ಹೂವಿನ ಹಾರಗಳನ್ನು ಹಾಕಿ, ಸಿಹಿ ಹಂಚಿ ಹಾರ್ದಿಕ ಶುಭ ಕೋರಿದರು.ಬೆಳಗ್ಗಿನಿಂದಲೇ ಕಾರ್ಯಕರ್ತರು ಮತ್ತು ಅಭಿಮಾನಿಗಳ ದಂಡು ಹರಿದುಬಂದಿದ್ದು, ಶಾಸಕರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.

ಯುವಕರು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ನೆಚ್ಚಿನ ನಾಯಕನಿಗೆ ದೀರ್ಘಾಯುರೋಗ್ಯ ಮತ್ತು ಯಶಸ್ಸನ್ನು ಹಾರೈಸಿದರು.ಈ ಸಂದರ್ಭದಲ್ಲಿ ಶಾಸಕ ವಿಶ್ವಾಸ ವೈದ್ಯ ಮಾತನಾಡಿದ ಅವರು, ಜನತೆಯ ಪ್ರೀತಿ ಮತ್ತು ವಿಶ್ವಾಸವೇ ನನ್ನ ದೊಡ್ಡ ಶಕ್ತಿ. ಹುಟ್ಟುಹಬ್ಬದ ಈ ಶುಭ ದಿನದಂದು ನಿಮ್ಮೆಲ್ಲರ ಆಶೀರ್ವಾದ ಪಡೆದಿರುವುದು ನನಗೆ ಅಪಾರ ಸಂತಸ ತಂದಿದೆ. ಸವದತ್ತಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮತ್ತು ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವುದೇ ನನ್ನ ಜೀವನದ ಮುಖ್ಯ ಗುರಿಯಾಗಿದ್ದು, ಕ್ಷೇತ್ರದ ಪ್ರತಿಯೊಬ್ಬರ ವಿಶ್ವಾಸಕ್ಕೆ ತಕ್ಕಂತೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ, ನಗರಸಭೆ ಪೌರಾಯುಕ್ತ ಸಂಗನಬಸಯ್ಯ ಜಿ., ಡಾ. ಶ್ರೀಪಾದ ಸಬನಿಸ, ತಾಪಂ ಇಒ ಆನಂದ ಬಡಕುಂದ್ರಿ, ಬಸವರಾಜ ಅಯ್ಯನಗೌಡ್ರ,ಡಾ ಅನಿಲ ಮರಲಿಂಗಣ್ಣವರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಮುಖಂಡರು, ಗ್ರಾಮ ಪಂಚಾಯಿತಿ ಸದಸ್ಯರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಹಿರಿಯರು ಉಪಸ್ಥಿತರಿದ್ದು ಶಾಸಕರಿಗೆ ಶುಭ ಹಾರೈಸಿದರು. 


ಸುದ್ದಿ ಓದಿ