ಸೌಂದತ್ತಿ

ಅಭಿಮಾನಿಗಳೊಂದಿಗೆ ಶಾಸಕ ವಿಶ್ವಾಸ ವೈದ್ಯ ಸಂಭ್ರಮಾಚರಣೆ

ಅಭಿಮಾನಿಗಳೊಂದಿಗೆ ಶಾಸಕ ವಿಶ್ವಾಸ ವೈದ್ಯ ಸಂಭ್ರಮಾಚರಣೆ

ಲೋಕದರ್ಶನ ವರದಿ 

ಸವದತ್ತಿ 17: ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಭರ್ಜರಿ ಗೆಲವು ಸಾಧಿಸಿದ ವಿಶ್ವಾಸ ವೈದ್ಯರವರು ಮತ ಎಣಿಕೆಯ ನಂತರ ನೇರವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಿ ಅಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿ ಸವದತ್ತಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು ಅವರ ನಿವಾಸಕ್ಕೆ ತೆರಳಿ ನೂತನ ಶಾಸಕ ವಿಶ್ವಾಸ ವೈದ್ಯರವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. 

ಮಂಗಳವಾರ ಬೆಳಿಗ್ಗೆ ಬೆಂಗಳೂರಿನಿಂದ ಸವದತ್ತಿ ಪಟ್ಟಣದ ತಮ್ಮ ನಿವಾಸಕ್ಕೆ ಆಗಮಿಸಿದ ಅವರು ಎರಡು ದಿನಗಳಿಂದ ಅಭಿಮಾನಿಗಳಿಂದ ಅಭಿಮಾನದ ಮಾಲೆಗಳನ್ನು ಸ್ವೀಕರಿಸುತ್ತಾ ರಿಲ್ಯಾಕ್ಸ ಮೂಡನಲ್ಲಿದ್ದಾರೆ. ಬಂದಂತ ಅಭಿಮಾನಿಗಳೊಂದಿಗೆ ತಮ್ಮ ಖುಷಿಯನ್ನು ಹಂಚಿಕೊಳ್ಳುತ್ತಾ ಎಲ್ಲರೊಂದಿಗೆ ಸಂಭ್ರಮ ಆಚರಿಸಿಕೊಳ್ಳುತ್ತಿದ್ದಾರೆ. 

ನೂತನ ಶಾಸಕರಾಗಿ ಆಯ್ಕೆಯಾದ ನಂತರ ಬುಧವಾರ ಬೆಳಿಗ್ಗೆ ಶ್ರೀಕ್ಷೇತ್ರ ಯಲ್ಲಮ್ಮಾ ದೇವಸ್ಥಾನಕ್ಕೆ ಕುಟುಂಬ ಸಮೇತ ತೆರಳಿದ ಅವರು ಶ್ರೀದೇವಿಯ ದರ್ಶನ ಪಡೆದುಕೊಂಡು ಕ್ಷೇತ್ರದ ವೀಕ್ಷಣೆ ಮಾಡಿದರು. 


ಸುದ್ದಿ ಓದಿ