ಅಂಗನವಾಡಿ ಕಾರ್ಯಕರ್ತೆಯರಿಗೆ ನೇಮಕಾತಿ ಪತ್ರ ವಿತರಿಸಿದ ಶಾಸಕ ವಿಶ್ವಾಸ ವೈದ್ಯ
MLA Vishwas Vaidya distributes appointment letters to Anganwadi workers
ಸವದತ್ತಿ 03: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಖಾಲಿ ಇದ್ದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ಶಾಸಕ ವಿಶ್ವಾಸ ವೈದ್ಯ ಅವರು ತಮ್ಮ ಗೃಹ ಕಚೇರಿಯಲ್ಲಿ ಅಧಿಕೃತವಾಗಿ ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು. ಅವರು ಮಾತನಾಡಿ ಅಂಗನವಾಡಿ ಕೇಂದ್ರಗಳು ಮಕ್ಕಳ ಶೈಕ್ಷಣಿಕ ಜೀವನದ ಮೊದಲ ಮೆಟ್ಟಿಲು.ಇಲ್ಲಿ ಮಕ್ಕಳಿಗೆ ನೀಡುವ ಸಂಸ್ಕಾರ ಮತ್ತು ಪ್ರೀತಿ ಅವರ ಭವಿಷ್ಯದ ಮೇಲೆ ದೊಡ್ಡ ಪ್ರಭಾವ ಬೀರುತ್ತದೆ.ಆದ್ದರಿಂದಕಾರ್ಯಕರ್ತೆಯರು ತಾಯಿಯ ಮಮತೆಯಿಂದ ಮಕ್ಕಳನ್ನು ಸಲಹಬೇಕು, ಎಂದು ಹೇಳಿದರು.
ಗ್ರಾಮೀಣ ಭಾಗದ ಮಕ್ಕಳ ಪೌಷ್ಟಿಕಾಂಶ, ಆರೋಗ್ಯ ಮತ್ತು ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ ಅಂಗನವಾಡಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ, ಎಂದು ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವಲ್ಲಿ ನಿಮ್ಮ ಜವಾಬ್ದಾರಿ ದೊಡ್ಡದು. ಅಪೌಷ್ಟಿಕತೆ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರಾಮಾಣಿಕವಾಗಿ ಶ್ರಮಿಸಿ, ಎಂದು ಕರೆ ನೀಡಿದರು. ಗ್ರಾಮ ಮಟ್ಟದಲ್ಲಿ ಇಲಾಖೆಯ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಮೂಲಕ ಮಾದರಿ ಸೇವೆಯನ್ನು ಸಲ್ಲಿಸಬೇಕು ಎಂದು ಅಂಗನವಾಡಿ ಕಾರ್ಯಕರ್ತೆರಿಗೆ ಕಿವಿಮಾತು ಎಂದರು.ಈ ಸಂದರ್ಭದಲ್ಲಿ ಸಿಡಿಪಿಓ ಅಮೃತ ಸಾಣಿಕೊಪ್ಪ, ಹಾಗೂ ನೂತನವಾಗಿ ನೇಮಕಗೊಂಡ ಅಂಗನವಾಡಿ ಕಾರ್ಯಕರ್ತೆರು ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 