ಶಾಸಕ ವಿಶ್ವಾಸ ವೈದ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆ
MLA Vishwas Vaidya elected as Director of District Central Cooperative Bank
ಯರಗಟ್ಟಿ 29: ಪಟ್ಟಣದ ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿ ನಡೆದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಚುನಾವಣೆಯಲ್ಲಿ ನಿರ್ದೇಶಕರಾಗಿ ಆಯ್ಕೆಯಾದ ಶಾಸಕ ವಿಶ್ವಾಸ ವೈದ್ಯ ಅವರಿಗೆ ಅಭಿನಂದನಾ ಕಾರ್ಯಕ್ರಮ ಶನಿವಾರ ಜರುಗಿತು.
ನೂತನ ನಿರ್ದೇಶಕರಾದ ಶಾಸಕ ವಿಶ್ವಾಸ ಅವರನ್ನು ಯರಗಟ್ಟಿ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ವತಿಯಿಂದ ಸನ್ಮಾನಿಸಲಾಯಿತು.ಈ ವೇಳೆ ಮಾತನಾಡಿದ ಶಾಸಕ ಈ ಭಾಗದ ರೈತರ ಹಿತಾಸಕ್ತಿ ಕಾಪಾಡುವುದಕ್ಕಾಗಿ ನೂತನ ಆಡಳಿತ ಮಂಡಳಿ ರಚನೆಯಾಗಿದೆ ಹೆಚ್ಚು ರೈತರನ್ನು ಸೇರಿಸುವ ಮೂಲಕ ಮತ್ತಷ್ಟು ಬಲಪಡಿಸಬೇಕು. ರೈತರಿಗೆ ಯಾವುದೇ ರೀತಿಯ ತೊಂದರೆಯಾದರೂ ಅವರ ಬೆನ್ನಿಗೆ ನಿಂತು ನೆರವಾಗುತ್ತೆನೆ’ ಎಂದರು. ಮುಂಬರುವ ದಿನಗಳಲ್ಲಿ ರೈತರಿಗೆ ಶ್ಯೂನ್ ಬಡ್ಡಿದರದಲ್ಲಿ ಸಾಲ ನೀಡುವ ಮೂಲಕ ರೈತರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಹೇಳಿದರು.
ಈ ವೇಳೆ ಭಾಗೋಜಿಕೋಪ್ಪದ ಡಾ ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ, ಸತ್ತಿಗೇರಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಪೂಜ್ಯ ಗಣಪತಿ ಮಹಾರಾಜರು, ಪರ್ವತಗೌಡ ಪಾಟೀಲ, ಎಪಿಎಂಸಿ ಅಧ್ಯಕ್ಷ ನೀಲಕಂಠ ಶೀದಬಸನ್ನವರ, ಸವದತ್ತಿ ಎಪಿಎಂಸಿ ಅಧ್ಯಕ್ಷ ಚಂದ್ರು ಜಂಬ್ರಿ, ಮಾಜಿ ತಾ. ಪಂ. ಸದಸ್ಯರಾದ ವಿಠ್ಠಲಗೌಡ ದೇವರಡ್ಡಿ, ಮಾಜಿ ತಾ. ಪಂ. ಅಧ್ಯಕ್ಷ ವಿನಯಕುಮಾರ ದೇಸಾಯಿ, ಕೆಎಂಎಫ್ ನಿರ್ದೇಶಕ ಶಂಕರ ಇಟ್ನಾಳ, ಬಿಡಿಸಿಸಿ ಬ್ಯಾಂಕ್ ಸಿಇಓ ಎನ್. ಜಿ. ಕಲಾವಂತ, ಬಿಡಿಸಿಸಿ ಬ್ಯಾಂಕ್ ಎಲ್ ಆಂಡ್ ಓ ಎಸ್. ಬಿ. ಬಾಗೇವಾಡಿ, ತಾಲೂಕಾ ನಿಯಂತ್ರಣಾಧಿಕಾರಿ ಸಿ. ಆರ್. ಪಾಟೀಲ, ಸಹಕಾರಿ ಅಭಿವೃದ್ಧಿ ಅಧಿಕಾರಿ ಎಮ್. ಎಸ್. ಗೌಡಪ್ಪನವರ, ಬ್ಯಾಂಕ್ ನೀರೀಕ್ಷಕ ಎಸ್. ಎಮ್. ಪತ್ತಾರ, ಎಸ್. ಎಸ್. ಸಿದ್ದನ್ನವರ, ಬ್ಯಾಂಕ್ ವ್ಯವಸ್ಥಾಪಕ ಎಸ್. ಎಸ್. ಗೋಣಿ ರವಿ ಪಿಕೆಪಿಎಸ್ ಅಧ್ಯಕ್ಷ ವಿಠ್ಠಲ ಬಂಟನೂರ, ಹೊನ್ನಾಳ, ಮಹಾರುದ್ರ್ಪ ಉಪ್ಪಿನ, ಪ್ರಕಾಶ ವಾಲಿ, ಬಂಗಾರೆಪ್ಪ ಹರಳಿ, ಪುಂಡಲೀಕ ಮೇಟಿ, ಲಕ್ಷ್ಮಣ ನಾಯ್ಕರ, ಮಹಾಂತೇಶ ಗೋಡಿ, ಸಂತೋಷ ಹಾದಿಮನಿ, ಮಲಿಕಸಾಬ ಬಾಗವಾನ ಸೇರಿದಂತೆ ತಾಲೂಕಿನ ಎಲ್ಲಾ ಪಿಕೆಪಿಎಸ್ ಅಧ್ಯಕ್ಷರು ಹಾಗೂ ಸದಸ್ಯರು ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 