ವಿವಿಧಅಭಿವೃದ್ಧಿ ಕಾಮಗಾರಿಗಳಿ ಶಾಸಕ ವಿಶ್ವಾಸ ವೈದ್ಯ ಚಾಲನೆ
MLA Vishwas Vaidya inaugurates various development works
ಯರಗಟ್ಟಿ, 19 : ?ಸಮೀಪದ ಬೂದಿಗೊಪ್ಪ ಗ್ರಾಮದಲ್ಲಿ ಸುಸಜ್ಜಿತ ರಸ್ತೆ ಮತ್ತು ಮೂಲಸೌಕರ್ಯಗಳನ್ನು ಹೊಂದಿರಬೇಕೆಂಬ ಸಂಕಲ್ಪದೊಂದಿಗೆ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಶಾಸಕ ವಿಶ್ವಾಸ ವೈದ್ಯ ಚಾಲನೆ ನೀಡಿದರು.
?ಬೂದಿಗೊಪ್ಪ ಗ್ರಾಮದಿಂದ ಬೆಳಗಾವಿ ಮುಖ್ಯ ರಸ್ತೆಯಿಂದ ಗ್ರಾಮಕ್ಕೆ ಕೂಡುವ ಸಿ.ಸಿ ರಸ್ತೆ ನಿರ್ಮಾಣಕ್ಕೆ ಅಂದಾಜು 1.20 ಕೋಟಿ ಕಾಮಗಾರಿಗಳು 2024-25ನೇ ಸಾಲಿನ ಮಳೆ ಪರಿಹಾರ ಕಾರ್ಯಕ್ರಮದಡಿ ಕೆ.ಆರ್.ಐ.ಡಿ.ಎಲ್ ವತಿಯಿಂದ ಅನುಷ್ಠಾನಗೊಳ್ಳುತ್ತಿವೆ ಎಂದು ಹೇಳಿದರು.ನಿಗದಿತ ಸಮಯದೊಳಗೆ ಅತ್ಯುತ್ತಮ ಗುಣಮಟ್ಟದೊಂದಿಗೆ ಕೆಲಸ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
?ಕ್ಷೇತ್ರದ ಜನತೆಯ ಆಶೋತ್ತರಗಳಿಗೆ ಸ್ಪಂದಿಸುವುದು ಮತ್ತು ಗ್ರಾಮಗಳ ಸವಾಂರ್ಗೀಣ ವಿಕಾಸಕ್ಕೆ ಶ್ರಮಿಸುವುದು ನಮ್ಮ ನಿರಂತರ ಉದ್ದೇಶವಾಗಿದೆ ಎಂದರು.ಈ ಸಂದರ್ಭದಲ್ಲಿ ವಿಠ್ಠಲ ಆಲದಕಟ್ಟಿ, ಮಹಾಂತೇಶ ಅಂಚಿ, ಮಾರುತಿ ಮುಸನ್ನವರ, ಹನಮಂತ ಆಲದಕಟ್ಟಿ, ಯಲ್ಲಪ್ಪ ಬೆಳವಡಿ, ಸಿದ್ದಪ್ಪ ಕುರಿ, ಮಹಾದೇವ ಆಲದಕಟ್ಟಿ, ಸಣ್ಣಪ್ಪ ಲಚಮಕ್ಕನವರ, ರಾಮಕೃಷ್ಣ ತೇನಗಿ, ಸಂತೋಷ ಮುಸ್ಸನ್ನವರ, ಕೆಎಂಎಫ್ ನಿರ್ದೇಶಕ ಶಂಕರ ಇಟ್ನಾಳ, ಯರಗಟ್ಟಿ ಎಪಿಎಂಸಿ ಅಧ್ಯಕ್ಷ ನೀಲಕಂಠ ಶೀದಬಸನ್ನವರ, ನಿಖಿಲ ಪಾಟೀಲ, ಸವದತ್ತಿ ಎಪಿಎಂಸಿ ಚಂದ್ರು ಜಂಬ್ರಿ, ಮುನವಳ್ಳಿ ಪುರಸಭೆ ಅಧ್ಯಕ್ಷ ಸಿ. ಬಿ. ಬಾಳಿ, ಮಲಿಕಸಾಬ ಬಾಗವಾನ ಗ್ರಾಮದ ಹಿರಿಯರು, ಮುಖಂಡರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 