ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ವಿಶ್ವಾಸ ವೈದ್ಯ ಭೂಮಿ ಪೂಜೆ

ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ವಿಶ್ವಾಸ ವೈದ್ಯ ಭೂಮಿ ಪೂಜೆ MLA Vishwas Vaidya performs Bhoomi Puja for CC road and sewerage construction work

ಸವದತ್ತಿ   06: ಗ್ರಾಮೀಣ ಭಾಗದ ರಸ್ತೆ ಮತ್ತು ಚರಂಡಿ ವ್ಯವಸ್ಥೆಯನ್ನು ಸುಧಾರಿಸುವ ಮೂಲಕ ಜನರಿಗೆ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಸ್ಥಳೀಯ ಶಾಸಕ ವಿಶ್ವಾಸ ವೈದ್ಯ ಹೇಳಿದರು.ಸವದತ್ತಿ ತಾಲೂಕಿನ ಹೂಲಿ ಗ್ರಾಮದಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 40 ಲಕ್ಷ  ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.ಗ್ರಾಮದ ರವಿ ಶೆಟ್ಟೆಪ್ಪ ಕಾಡಪ್ಪನವರ ಅವರ ಮನೆಯಿಂದ ಅಶೋಕ ಭಜಂತ್ರಿ ಅವರ ಮನೆಯವರೆಗೆ ನಿರ್ಮಾಣವಾಗಲಿರುವ ಈ ರಸ್ತೆಯು ಗ್ರಾಮಸ್ಥರ ದೀರ್ಘಕಾಲದ ಬೇಡಿಕೆಯಾಗಿತ್ತು. ಈ ಯೋಜನೆಯು ಗ್ರಾಮದ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದ ಅವರು ಕಾಮಗಾರಿಯನ್ನು ಗುಣಮಟ್ಟದಿಂದ ಮತ್ತು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು, ಗ್ರಾಮ ಪಂಚಾಯತ್ ಸದಸ್ಯರು ಮತ್ತು ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.