ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ವಿಶ್ವಾಸ ವೈದ್ಯ ಭೂಮಿ ಪೂಜೆ
MLA Vishwas Vaidya performs Bhoomi Puja for CC road and sewerage construction work
ಸವದತ್ತಿ 06: ಗ್ರಾಮೀಣ ಭಾಗದ ರಸ್ತೆ ಮತ್ತು ಚರಂಡಿ ವ್ಯವಸ್ಥೆಯನ್ನು ಸುಧಾರಿಸುವ ಮೂಲಕ ಜನರಿಗೆ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಸ್ಥಳೀಯ ಶಾಸಕ ವಿಶ್ವಾಸ ವೈದ್ಯ ಹೇಳಿದರು.ಸವದತ್ತಿ ತಾಲೂಕಿನ ಹೂಲಿ ಗ್ರಾಮದಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 40 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.ಗ್ರಾಮದ ರವಿ ಶೆಟ್ಟೆಪ್ಪ ಕಾಡಪ್ಪನವರ ಅವರ ಮನೆಯಿಂದ ಅಶೋಕ ಭಜಂತ್ರಿ ಅವರ ಮನೆಯವರೆಗೆ ನಿರ್ಮಾಣವಾಗಲಿರುವ ಈ ರಸ್ತೆಯು ಗ್ರಾಮಸ್ಥರ ದೀರ್ಘಕಾಲದ ಬೇಡಿಕೆಯಾಗಿತ್ತು. ಈ ಯೋಜನೆಯು ಗ್ರಾಮದ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದ ಅವರು ಕಾಮಗಾರಿಯನ್ನು ಗುಣಮಟ್ಟದಿಂದ ಮತ್ತು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು, ಗ್ರಾಮ ಪಂಚಾಯತ್ ಸದಸ್ಯರು ಮತ್ತು ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 