ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ರಾಜೀನಾಮೆ ಸುಳಿವು ನೀಡಿದ ಶಾಸಕ ಯಶವಂತರಾಯಗೌಡ ಪಾಟೀಲ
MLA Yashvantharayagouda Patil hints at resignation after missing out on a ministerial berth
ಇಂಡಿ, ಆ. 3: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಇಂಡಿ ವಿಧಾನಸಭಾ ಕ್ಷೇತ್ರ ರಚನೆಯಾದ ಬಳಿಕ ಇದುವರೆಗೆ ಕ್ಷೇತ್ರಕ್ಕೆ ಸಚಿವ ಸ್ಥಾನ ದೊರೆತಿರಲಿಲ್ಲ. ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯಶವಂತರಾಯಗೌಡ ಪಾಟೀಲ ಅವರಿಗೆ ಈ ಬಾರಿ ಸಚಿವ ಸ್ಥಾನ ದೊರೆಯುವ ನೀರೀಕ್ಷೆಯನ್ನು ಕ್ಷೇತ್ರದ ಜನತೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹೊಂದಿದ್ದರು. ಆದರೆ ಸಚಿವ ಸಂಪುಟದಲ್ಲಿ ಅವಕಾಶ ಸಿಗದ ಹಿನ್ನೆಲೆಯಲ್ಲಿ ಬೆಂಬಲಿಗರಲ್ಲಿ ನಿರಾಸೆ ವ್ಯಕ್ತವಾಗಿದೆ.
ಸಚಿವ ಸಂಪುಟ ವಿಸ್ತರಣೆಯ ಬಳಿಕ ಆಡಳಿತಾರೂಢ ಪಕ್ಷದ ಕೆಲವು ಶಾಸಕರು ಹಾಗೂ ಹಿರಿಯ ನಾಯಕರಲ್ಲೂ ಅಸಮಾಧಾನದ ವಾತಾವರಣ ನಿರ್ಮಾಣವಾಗಿರುವ ಬೆನ್ನಲ್ಲೇ, ಯಶವಂತರಾಯಗೌಡ ಪಾಟೀಲ ಅವರ ಪ್ರತಿಕ್ರಿಯೆ ರಾಜಕೀಯ ಮಹತ್ವ ಪಡೆದುಕೊಂಡಿದೆ.
ಸಚಿವ ಸ್ಥಾನ ಸಿಗದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಕುರಿತು ಯೋಚಿಸುತ್ತಿರುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಸಂಬಂಧ ವಿಧಾನಸಭಾಧ್ಯಕ್ಷರನ್ನು ಭೇಟಿ ಮಾಡಲು ಸಮಯ ಕೋರಿರುವುದಾಗಿ ತಿಳಿಸಿದ್ದು, ಅಂತಿಮ ನಿರ್ಧಾರ ಕೈಗೊಳ್ಳುವ ಮೊದಲು ತಮ್ಮ ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ಚರ್ಚಿಸುವುದಾಗಿ ಹೇಳಿದ್ದಾರೆ.
ಯಶವಂತರಾಯಗೌಡ ಪಾಟೀಲ ಅವರು ನಿಜವಾಗಿಯೂ ರಾಜೀನಾಮೆ ಸಲ್ಲಿಸುತ್ತಾರೆಯೇ ಅಥವಾ ಪಕ್ಷದ ಹೈಕಮಾಂಡ್‌ನೊಂದಿಗೆ ಮಾತುಕತೆಯ ಬಳಿಕ ತಮ್ಮ ನಿರ್ಧಾರವನ್ನು ಮರುಪರೀಶೀಲಿಸುತ್ತಾರೆಯೇ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಬೇಕಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 