ಇಂದು (ಸ.8) ವಿವಿಧ ಕಾಮಗಾರಿಗಳಿಗೆ ಶಾಸಕರಿಂದ ಚಾಲನೆ

ಇಂದು (ಸ.8) ವಿವಿಧ ಕಾಮಗಾರಿಗಳಿಗೆ ಶಾಸಕರಿಂದ ಚಾಲನೆ  MLA launches various works today (Sept 8)


ತಾಳಿಕೋಟಿ 07:  ಮುದ್ದೇಬಿಹಾಳ ಮತಕ್ಷೇತ್ರದ ಶಾಸಕರಾದ ಸಿ.ಎಸ್‌.ನಾಡಗೌಡ (ಅಪ್ಪಾಜಿ) ಅವರ ನೇತೃತ್ವದಲ್ಲಿ ಇಂದು(ಸ.8) ತಾಳಿಕೋಟಿ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ, ಶಂಕುಸ್ಥಾಪನೆ ಹಾಗೂ ಚಾಲನೆ ನೀಡುವ ಕಾರ್ಯಕ್ರಮ ನಡೆಯಲಿದೆ. ಮುಂಜಾನೆ 10:00 ಘಂಟೆಗೆ ತಾಳಿಕೋಟಿ ಪ್ರವಾಸಿ ಮಂದಿರದಲ್ಲಿರುವ ಶಾಸಕರ ನೂತನ ಕಾರ್ಯಾಲಯದ ಉದ್ಘಾಟನೆ,10-30 ಘಂಟೆಗೆ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರ(ಸರಕಾರಿ ಆಸ್ಪತ್ರೆ)ದಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ವತಿಯಿಂದ ನೀಡಲ್ಪಟ್ಟ ನೂತನ ಅಂಬ್ಯೂಲೆನ್ಸ್‌ ಹಸ್ತಾಂತರ ಕಾರ್ಯಕ್ರಮ ಹಾಗೂ11-00 ಘಂಟೆಗೆ ಹಳೆಯ ತರಕಾರಿ ಮಾರುಕಟ್ಟೆ ನಿರ್ಮಾಣ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದು ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಪಟ್ಟಣದ ನಾಗರಿಕರು ಭಾಗವಹಿಸಬೇಕೆಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ಚೋರಗಸ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.