ಇಂದು (ಸ.8) ವಿವಿಧ ಕಾಮಗಾರಿಗಳಿಗೆ ಶಾಸಕರಿಂದ ಚಾಲನೆ
MLA launches various works today (Sept 8)
ತಾಳಿಕೋಟಿ 07: ಮುದ್ದೇಬಿಹಾಳ ಮತಕ್ಷೇತ್ರದ ಶಾಸಕರಾದ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರ ನೇತೃತ್ವದಲ್ಲಿ ಇಂದು(ಸ.8) ತಾಳಿಕೋಟಿ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ, ಶಂಕುಸ್ಥಾಪನೆ ಹಾಗೂ ಚಾಲನೆ ನೀಡುವ ಕಾರ್ಯಕ್ರಮ ನಡೆಯಲಿದೆ. ಮುಂಜಾನೆ 10:00 ಘಂಟೆಗೆ ತಾಳಿಕೋಟಿ ಪ್ರವಾಸಿ ಮಂದಿರದಲ್ಲಿರುವ ಶಾಸಕರ ನೂತನ ಕಾರ್ಯಾಲಯದ ಉದ್ಘಾಟನೆ,10-30 ಘಂಟೆಗೆ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರ(ಸರಕಾರಿ ಆಸ್ಪತ್ರೆ)ದಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ವತಿಯಿಂದ ನೀಡಲ್ಪಟ್ಟ ನೂತನ ಅಂಬ್ಯೂಲೆನ್ಸ್ ಹಸ್ತಾಂತರ ಕಾರ್ಯಕ್ರಮ ಹಾಗೂ11-00 ಘಂಟೆಗೆ ಹಳೆಯ ತರಕಾರಿ ಮಾರುಕಟ್ಟೆ ನಿರ್ಮಾಣ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದು ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಪಟ್ಟಣದ ನಾಗರಿಕರು ಭಾಗವಹಿಸಬೇಕೆಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ಚೋರಗಸ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 