ಶಾಸಕರ ರಾಜೀನಾಮೆ ಜನಾದೇಶಕ್ಕೆ ಅಗೌರವ: ಜೆಡಿಎಸ್ ಮುಖಂಡ ಬಿ.ಡಿ. ಪಾಟೀಲ ಆರೋಪ
MLAs' resignations disrespect the public mandate: JD(S) leader B.D. Patil alleges
ಇಂಡಿ, ಆ. 6: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನತಾ ಜನಾರ್ದನರ ತೀರ್ಿಗೆ ಅತ್ಯುನ್ನತ ಸ್ಥಾನವಿದೆ. ಜನರು ತಮ್ಮ ಆಶಯಗಳನ್ನು ಈಡೇರಿಸುವ ಉದ್ದೇಶದಿಂದ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುತ್ತಾರೆ. ಆದರೆ ಇಂಡಿ ಮತಕ್ಷೇತ್ರದ ಶಾಸಕರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕ್ಷೇತ್ರದ ಜನರ ಜನಾದೇಶಕ್ಕೆ ಅಗೌರವ ತೋರಿದ್ದು, ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತಂದಿದ್ದಾರೆ ಎಂದು ಇಂಡಿ ಮತಕ್ಷೇತ್ರದ ಜೆಡಿಎಸ್ ಮುಖಂಡ ಬಿ.ಡಿ. ಪಾಟೀಲ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, "ಕೇವಲ ಸಚಿವ ಸ್ಥಾನ ದೊರೆಯಲಿಲ್ಲ ಎಂಬ ಕಾರಣಕ್ಕೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಯಾವುದೇ ಜನಪ್ರತಿನಿಧಿಗೆ ಶೋಭೆ ತರುವ ನಡೆ ಅಲ್ಲ. ಜನರು ನೀಡಿದ ಜವಾಬ್ದಾರಿಯನ್ನು ಪೂರ್ಣ ಅವಧಿಯವರೆಗೆ ನಿಷ್ಠೆಯಿಂದ ನಿರ್ವಹಿಸುವುದು ಜನಪ್ರತಿನಿಧಿಯ ಕರ್ತವ್ಯ" ಎಂದು ತಿಳಿಸಿದ್ದಾರೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಿಂದ ಇಂದಿನವರೆಗೂ ಇಂಡಿ ಮತಕ್ಷೇತ್ರದ ರಸ್ತೆ ಅಭಿವೃದ್ಧಿ, ಸಾರಿಗೆ ವ್ಯವಸ್ಥೆ ಸುಧಾರಣೆ, ಬರಗಾಲದಿಂದ ಸಂಕಷ್ಟದಲ್ಲಿರುವ ರೈತರ ಸಮಸ್ಯೆಗಳು, ಕಬ್ಬು ಬೆಳೆಗಾರರ ಸಮಸ್ಯೆ, ಕೃಷ್ಣಾ ಕಾಲುವೆಗೆ ನೀರು ಹರಿಸುವುದು ಹಾಗೂ ಭೀಮಾ ನದಿ ತೀರದ ರೈತರ ಸಮಸ್ಯೆಗಳಿಗೆ ಶಾಸಕರು ನೀರೀಕ್ಷಿತ ಮಟ್ಟದಲ್ಲಿ ಸ್ಪಂದಿಸಿಲ್ಲ ಎಂದು ಅವರು ಆರೋಪಿಸಿದರು.
"ಕ್ಷೇತ್ರದ ಅಭಿವೃದ್ಧಿಯತ್ತ ಗಮನ ಹರಿಸುವ ಬದಲು ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ವೈಯಕ್ತಿಕ ಹುದ್ದೆಗಳಿಗಿಂತ ಕ್ಷೇತ್ರದ ಜನರ ಹಿತಾಸಕ್ತಿ ಮತ್ತು ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವುದು ಜನಪ್ರತಿನಿಧಿಯ ಮುಖ್ಯ ಕರ್ತವ್ಯವಾಗಿದೆ" ಎಂದು ಬಿ.ಡಿ. ಪಾಟೀಲ ಹೇಳಿದ್ದಾರೆ. ಜನರು ನೀಡಿದ ಜನಾದೇಶಕ್ಕೆ ಗೌರವ ನೀಡಿ, ಕ್ಷೇತ್ರದ ಅಭಿವೃದ್ಧಿಗೆ ಬದ್ಧತೆಯಿಂದ ಕಾರ್ಯನಿರ್ವಹಿಸುವಂತೆ ಅವರು ಮನವಿ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 