ಹುಡೇಂ ಗ್ರಾಮದಲ್ಲಿ ಏಕಲವ್ಯ ಮಾದರಿ ವಸತಿ ಶಾಲೆ ಸ್ಥಾಪನೆಗೆ ಸಂಸದ ಈ. ತುಕಾರಾಂ ಮನವಿ
MP E. Tukaram appeals for establishment of Ekalavya model residential school in Hudem village
ವಿಜಯನಗರ(ಹೊಸಪೇಟೆ) 13: ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಹುಡೇಂ ಗ್ರಾಮದಲ್ಲಿ ಏಕಲವ್ಯ ಮಾದರಿ ವಸತಿ ಶಾಲೆ ಮಂಜೂರು ಮಾಡುವಂತೆ ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದ ಈ. ತುಕಾರಾಂ ಅವರು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಜುವೆಲ್ ಓರಾಮ್ ಅವರಿಗೆ ಮನವಿ ಸಲ್ಲಿಸಿದರು. ಕೂಡ್ಲಿಗಿ ತಾಲ್ಲೂಕು ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಅತೀ ಹಿಂದುಳಿದ ಪ್ರದೇಶವಾಗಿದೆ. ಆದ್ದರಿಂದ ಈ ಭಾಗದಲ್ಲಿ ವಸತಿ ಶಾಲೆಯ ಆರಂಭಿಸುವ ಅಗತ್ಯವಿದ್ದು, ಏಕಲವ್ಯ ವಸತಿ ಶಾಲೆ ಸ್ಥಾಪನೆಯಿಂದ ಭವಿಷ್ಯದ ಪೀಳಿಗೆ ಸಾಕಷ್ಟು ಶೈಕ್ಷಣಿಕ ಪ್ರಗತಿ ಸಾಧಿಸಲು ಅನುಕೂಲವಾಗಲಿದೆ ಎಂದು ವಿವರಿಸಿದ್ದಾರೆ. ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿದ ಸಚಿವರು ಕೂಡಲೇ ಅನುಮೋದನೆ ನೀಡುವ ಭರವಸೆ ನೀಡಿದರು. ಸಂಸದರ ಈ ಕಾರ್ಯಕ್ಕೆ ಸ್ಥಳೀಯ ಮುಖಂಡರು, ಶಿಕ್ಷಣ ಪ್ರೇಮಿಗಳು ಮತ್ತು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 