ಮನರಂಜನೆ

ಪುನೀತ್‌ರಾಜಕುಮಾರ್‌ನಿಂದ ಪ್ರೇರಿತಗೊಂಡಿರುವ ಎಂ.ಪಿ.ರೇಣುಕಾಚಾರ್ಯ

ಪುನೀತ್‌ರಾಜಕುಮಾರ್‌ನಿಂದ ಪ್ರೇರಿತಗೊಂಡಿರುವ ಎಂ.ಪಿ.ರೇಣುಕಾಚಾರ್ಯ

ಬೆಂಗಳೂರು, ನ‌ 7: ದಿ.ನಟ ಪುನೀತ್ ರಾಜಕುಮಾರ್ ಅವರಿಂದ ಪ್ರೇರಿತಗೊಂಡಿರುವ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ  ನೇತ್ರದಾನಕ್ಕೆ ಮುಂದಾಗಿದ್ದಾರೆ.ಅಲ್ಲದೇ ಅವರ ಕುಟುಂಬಸ್ಥರು ಕೂಡ ನೇತ್ರದಾನ ಮಾಡಲಿದ್ದಾರೆ.

ಎಂ.ಪಿ.ರೇಣುಕಚಾರ್ಯ ಮತ್ತು ಅವರ ಕುಟುಂಬದವರು ಮರಣೋತ್ತರ ನಂತರ ತಮ್ಮ ನೇತ್ರಗಳನ್ನು ದಾನ ಮಾಡುವ ಮಹತ್ವದ ನಿರ್ಧಾರವನ್ನು ನಾಳೆ  ಅಧಿಕೃತವಾಗಿ ಮತಕ್ಷೇತ್ರ ಹೊನ್ನಾಳಿಯಲ್ಲಿ ಘೋಷಣೆ ಮಾಡಲಿದ್ದಾರೆ. 

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನಲ್ಲಿ ನಾಳೆ ಸಂಜೆ 5 ಗಂಟೆಗೆ  ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ರೇಣುಕಾಚಾರ್ಯ  ಅವರ ಅಭಿಮಾನಿಗಳು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ಶ್ರದ್ದಾಂಜಲಿ ಹಾಗೂ ಸಂಗೀತ ನಮನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ವರನಟ ಡಾ.ರಾಜ್‍ಕುಮಾರ್  ಹಾಗೂ ಪುನೀತ್ ರಾಜ್‍ಕುಮಾರ್ ಅವರ  ನೂರಾರು ಅಭಿಮಾನಿಗಳು ತಮ್ಮ ನೇತ್ರಗಳನ್ನು ದಾನ ಮಾಡಲು ತಮ್ಮ ಹೆಸರುಗಳನ್ನು ನೋಂದಾಯಿಸುವ ಮಹತ್ವದ ನಿರ್ಧಾರವನ್ನು ಸಹ ಈ ಕಾರ್ಯಕ್ರಮದಲ್ಲಿ ಘೋಷಣೆ ಮಾಡಲಿದ್ದಾರೆ. 

ನಾಳೆ ಸಂಜೆ ನಡೆಯುವ  ಶ್ರದ್ದಾಂಜಲಿ ಹಾಗೂ ಸಂಗೀತ ನಮನ ಕಾರ್ಯಕ್ರಮವನ್ನು ನಟರಾಜ್ ಎಂಟ್ರನೈರ್ಸ್ ಸಾರಥ್ಯದಲ್ಲಿ ಖ್ಯಾತ ಹಿನ್ನೆಲೆ ಗಾಯಕ ರಾಜೇಶ್ ಕೃಷ್ಣನ್, ಕಲಾವಿದರಾದ ಹೊನ್ನವಳ್ಳಿ ಕೃಷ್ಣ,ಟೆನ್ನಿಸ್ ಕೃಷ್ಣ ಭಾಗವಹಿಸಲಿದ್ದಾರೆ.

ಸುದ್ದಿ ಓದಿ