ತುಂಬಿದ ಕೆರೆಗೆ ಬಾಗಿನ ಅರ್ಪಿಸಿದ ಸಂಸದರು
ಇಂಡಿ 5: ತಾಲ್ಲೂಕಿನ ಅಥರ್ಗಾ (ರಾಜನಾಳ)ಗ್ರಾಮದಲ್ಲಿರುವ ತುಂಬಿದ ಕೆರೆಗೆ ಕೇಂದ್ರ ಮಾಜಿ ಸಚಿವರು ಹಾಗೂ ಹಾಲಿ ಲೋಕಸಭಾ ಸದಸ್ಯರಾದ ರಮೇಶ ಜಿಗಜಿಣಗಿ ಶನಿವಾರ ರೈತರೊಂದಿಗೆ ಕೆರೆಗೆ ತೆರಳಿ ತುಂಬಿದ ಕೆರೆಗೆ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಿಸಿದರು.ನಂತರ ಮಾತನಾಡಿದ ರಮೇಶ ಜಿಗಜಿಣಗಿ ಅವರು ತುಂಬಿದ ಕೆರೆ ಕಟ್ಟೆಗಳಿಗೆ, ಹಳ್ಳಕೊಳ್ಳಗಳಿಗೆ, ತುಂಬಿ ಹರಿಯುವ ನದಿಗಳಿಗೆ ಕತಜ್ಞತಾ ಅರಾ್ಣ ಮನೋಭಾವದಿಂದ ಪೂಜೆ ಸಲ್ಲಿಸುವುದು ನಮ್ಮ ಭಾರತೀಯ ಸಂಸ್ಕೃತಿಯಾಗಿದೆ.
ಮನುಷ್ಯನ ಬದುಕಿನಲ್ಲಿ ಜೀವನಾಡಿಯಾಗಿರುವ ತುಂಬಿದ ಕೆರೆಗಳಿಗೆ ಬಾಗಿನ ಅರ್ಿಸಿದರೆ ಮುಂದಿನ ದಿನಮಾನಗಳಲ್ಲಿಯೂ ಕೆರೆಗಳು ನೀರಿನಿಂದ ತುಂಬಿರಲಿ ಎನ್ನುವ ಭಕ್ತಿ ಸಮರ್ಿಸಿದಂತಾಗಿದೆ ಎಂದರು.ತುಂಬಿರುವ ಕೆರೆಗಳನ್ನು ಪೂಜಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಗಂಗೆ ನಮ್ಮೆಲ್ಲರ ಮೇಲೆ ದಯೆ ತೋರಿ, ಪ್ರತಿ ವರ್ಷ ಕೆರೆಗಳು ತುಂಬುವ ಮೂಲಕ ರೈತರಿಗೆ ದಯೆ ತೋರಲಿ ಎಂದು ಹಾರೈಸಿದರು.ಈ ಸಂದರ್ಭದಲ್ಲಿ ಅಥರ್ಗಾ ಗ್ರಾಮದ ಮುರುಘೇಂದ್ರ ಸ್ವಾಮಿಗಳು ಹಾಗೂ ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ, ಅಣ್ಣಪ್ಪಸಾಹುಕಾರ ಖೈನೂರ, ಜೆಡಿಎಸ್ ತಾಲೂಕು ಘಟಕ ಅಧ್ಯಕ್ಷರಾದ ಬಿ ಡಿ ಪಾಟೀಲ, ಬಿಜೆಪಿ ಇಂಡಿ ಮಂಡಲ ಅಧ್ಯಕ್ಷರಾದ ಮಲ್ಲಿಕಾರ್ಜುನ ಕಿವಡೆ, ಅಥರ್ಗಾ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಾಗುಗೌಡ ಪಾಟೀಲ, ಬಿಜೆಪಿ ಮುಖಂಡರಾದ ಅನೀಲ ಜಮಾದಾರ, ಶೀಲವಂತ ಉಮರಾಣಿ,ರವಿ ವಗ್ಗಿ, ಅಶೋಕಗೌಡ ಬಿರಾದಾರ, ಬಸ್ಸು ಸಾಹುಕಾರ ಇಂಗಳೇಶ್ವರ, ಅಣ್ಣಪ್ಪಗೌಡ ಪಾಟೀಲ, ಶಿವಾನಂದಯ್ಯ ಮಠಪತಿ, ಸಿದ್ದು ಗೋಟ್ಯಾಳ, ಶ್ರೀಶೈಲ ನಾಗಸೂರ, ಹಣಮಂತ ಬಿರಾದಾರ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.