ಅಪಘಾತ ತಡೆಗೆ ಮುಂದಾದ ಮಚ್ಚೆ ಗ್ರಾಮದ ಯುವಕರು: ರಸ್ತೆ ಬದಿಯಲ್ಲಿ ಸೂಚನಾ ಫಲಕ ಅಳವಡಿಕೆ
ಬೆಳಗಾವಿ, ಅ.29: ಆಡಳಿತ ವ್ಯವಸ್ಥೆ ಮಾಡಬೇಕಾದ ಕೆಲಸವನ್ನು ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ಯುವಕರು ಸ್ವಯಂಪ್ರೇರಿತರಾಗಿ ಕೈಗೆತ್ತಿಕೊಂಡು ಮಾದರಿಯಾಗಿದ್ದಾರೆ.
ಗ್ರಾಮದ ರಸ್ತೆಯಲ್ಲಿ ಹೆಚ್ಚುತ್ತಿರುವ ಅಪಘಾತಗಳು ಹಾಗೂ ಸಂಚಾರ ಸಮಸ್ಯೆಯನ್ನು ಗಮನಿಸಿದ ಯುವಕರು, ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ರಸ್ತೆ ಬದಿಯಲ್ಲಿ ವಿವಿಧ ಸೂಚನಾ ಫಲಕಗಳನ್ನು ಅಳವಡಿಸಿದ್ದಾರೆ.
ಈ ರಸ್ತೆಯಲ್ಲಿ ಪದೇಪದೇ ಅಪಘಾತಗಳು ಸಂಭವಿಸುತ್ತಿದ್ದು, ಸಂಚಾರಕ್ಕೂ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡ ಯುವಕರು ಸ್ವಯಂಪ್ರೇರಿತರಾಗಿ ಈ ಕಾರ್ಯಕ್ಕೆ ಮುಂದಾಗಿದ್ದಾರೆ. ಯುವಕರ ಈ ಪ್ರಯತ್ನದಿಂದ ವಾಹನ ಸವಾರರಿಗೆ ಸಂಚಾರ ಸುಗಮವಾಗುವುದರ ಜೊತೆಗೆ ಅಪಘಾತಗಳನ್ನು ತಡೆಗಟ್ಟಲು ಸಹಕಾರಿಯಾಗಲಿದೆ.
ಸಾಮಾಜಿಕ ಕಳಕಳಿಯಿಂದ ಯುವಕರು ಕೈಗೊಂಡಿರುವ ಈ ಕಾರ್ಯಕ್ಕೆ ಸ್ಥಳೀಯರು ಹಾಗೂ ಗ್ರಾಮಸ್ಥರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.