ಮಧುರಚೆನ್ನರ ಕಾವ್ಯ ಕನ್ನಡ ಸಾಹಿತ್ಯದ ಅಮೂಲ್ಯ ಸಂಪತ್ತು
Madhurchenna's poetry is a precious treasure of Kannada literature
ಲೋಕದರ್ಶನ ವರದಿ
ವಿಜಯಪುರ ಜು.31: ಕನ್ನಡ ನವೋದಯ ಸಾಹಿತ್ಯದ ಪ್ರಮುಖ ಕವಿ ಮಧುರಚೆನ್ನರು ಜನಮಾನಸದಲ್ಲಿ ಶಾಶ್ವತವಾಗಿ ಉಳಿದ ದಾರ್ಶನಿಕ ಕವಿಯಾಗಿದ್ದಾರೆ. ಭೀಮಾ ತೀರದಲ್ಲಿ ಹುಟ್ಟಿ ಬೆಳೆದ ಅವರು ತಮ್ಮ ಕಾವ್ಯದ ಮೂಲಕ ಕನ್ನಡ ನೆಲದ ಅಸ್ಮಿತೆಯನ್ನು ಜಾಗತಿಕ ಮಟ್ಟಕ್ಕೆ ಪರಿಚಯಿಸಿದ್ದಾರೆ ಎಂದು ಸಾಹಿತಿ ಸಿ.ಎಂ. ಬಂಡಗಾರ ಹೇಳಿದರು.
ತಾಲೂಕಿನ ಮೊರಟಗಿ ಗ್ರಾಮದ ಕಲ್ಪವೃಕ್ಷ ಕಾಲೇಜಿನಲ್ಲಿ ಶುಕ್ರವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಲಸಂಗಿ ಗೆಳೆಯರ ಪ್ರತಿಷ್ಠಾನ ಹಾಗೂ ಮೊರಟಗಿ ಕಲ್ಪವೃಕ್ಷ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಹಾಗೂ ಪದವಿಪೂರ್ವ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ನಡೆದ ಮಧುರಚೆನ್ನರ 123ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.
ಪ್ರಕೃತಿಯೊಂದಿಗೆ ಕಾವ್ಯದ ಲೇಪನ ಮಾಡಿ ಜಾಗತಿಕ ಆಧ್ಯಾತ್ಮಿಕ ಸಾಹಿತ್ಯ ಲೋಕದಲ್ಲಿ ಮಧುರಚೆನ್ನರು ವಿಶಿಷ್ಟ ಸ್ಥಾನ ಗಳಿಸಿದ್ದಾರೆ. ಹಲಸಂಗಿಯನ್ನು ನವೋದಯ ಕಾವ್ಯದ ಕೇಂದ್ರವನ್ನಾಗಿ ರೂಪಿಸಿದ ಕೀರ್ತಿ ಅವರದು ಎಂದು ಬಂಡಗಾರ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಲ್ಪವೃಕ್ಷ ಕಾಲೇಜಿನ ಪ್ರಾಚಾರ್ಯ ಎ.ಬಿ. ಸಿಂದಗಿ ಮಾತನಾಡಿ, ಮಧುರಚೆನ್ನರ ಸಾಹಿತ್ಯ ಹಾಗೂ ಚಿಂತನೆಗಳ ಮೇಲೆ ಶ್ರೀ ಅರವಿಂದರ ಪ್ರಭಾವವಿತ್ತು. ಅನುಭಾವದ ನೆಲೆಯಲ್ಲಿ ಅವರು ರಚಿಸಿದ ವಿಶಿಷ್ಟ ಸಾಹಿತ್ಯ ಕನ್ನಡಕ್ಕೆ ಅಮೂಲ್ಯ ಕೊಡುಗೆಯಾಗಿದ್ದು, ಅವರ ಸಾಹಿತ್ಯ ಪರಂಪರೆ ಸದಾ ಅವಿಸ್ಮರಣೀಯವಾಗಿರುತ್ತದೆ ಎಂದರು.
ಮಧುರಚೆನ್ನರ ಕುಟುಂಬ ಸದಸ್ಯರಾದ ಜಗದೀಶ್ ಗಲಗಲಿ ಹಾಗೂ ಮಹಾದೇವಿ ಗಲಗಲಿ ಅವರು ಕವಿಯ ಬದುಕು, ಸಾಹಿತ್ಯ ಹಾಗೂ ಆಧ್ಯಾತ್ಮಿಕ ಚಿಂತನೆಗಳನ್ನು ಸ್ಮರಿಸಿದರು. ಪ್ರತಿಷ್ಠಾನದ ಸದಸ್ಯ ಬಿ.ಆರ್. ಬನಸೋಡೆ ಪ್ರಾಸ್ತಾವಿಕವಾಗಿ ಮಾತನಾಡಿ, ಮಧುರಚೆನ್ನರು ಓದಿದ್ದು ಏಳನೇ ತರಗತಿವರೆಗೆ ಆದರೂ 22 ಭಾಷೆಗಳಲ್ಲಿ ಪಾಂಡಿತ್ಯ ಹೊಂದಿದ್ದರು ಎಂದು ಹೇಳಿದರು.
ಕಾರ್ಯಕ್ರಮವನ್ನು ಪ್ರತಿಷ್ಠಾನದ ಅಧ್ಯಕ್ಷ ಶಿವಶರಣಗೌಡ ಬಿರಾದಾರ ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಪ್ರತಿಷ್ಠಾನದ ಸದಸ್ಯರಾದ ಪುಲಕೇಶಿ ಪುರುಷೋತ್ತಮ ಗಲಗಲಿ, ದಾಕ್ಷಾಯಿಣಿ ಬಿರಾದಾರ, ಇಲಾಖೆಯ ಸಿಬ್ಬಂದಿಗಳಾದ ಅಯ್ಯುಬ್ ದ್ರಾಕ್ಷಿ, ಅಂಜನಾ ಈಜೆರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಹಾಗೂ ಪ್ರತಿಷ್ಠಾನದ ಕಾರ್ಯದರ್ಶಿ ಸಂತೋಷ ಭೋವಿ ಸ್ವಾಗತಿಸಿದರು. ಸದಸ್ಯ ಡಾ. ರಮೇಶ್ ಕತ್ತಿ ವಂದಿಸಿದರು. ಪ್ರೊ. ಜಿ.ಎಂ. ಪಾಟೀಲ ಕಾರ್ಯಕ್ರಮ ನಿರೂಪಿಸಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕಲಾವಿದ ಭೀಮಣ್ಣ ಕಟ್ಟಿಮನಿ ಹಾಗೂ ಸಂಗಡಿಗರಿಂದ ಸಂಗೀತ ಕಾರ್ಯಕ್ರಮ ನಡೆಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 