ಮಾಗಳ ನಾಡದೋಣಿ ದುರಸ್ಥಿ ; 3 ಜಿಲ್ಲೆ ಸಂಪರ್ಕ ಕಡಿತ
ಹೂವಿನಹಡಗಲಿ 22: ತುಂಗಭದ್ರಾ ನದಿಯಲ್ಲಿ ರಂದ್ರ ಬಿದ್ದು ನಿಂತ ನಾಡದೋಣಿ 3 ಜಿಲ್ಲೆಗಳ ಸಂಪರ್ಕ ಕಡಿತ ಗೊಂಡ ಘಟನೆ ತಾಲ್ಲೂಕಿನ ಮಾಗಳ-ವಿಠಲಾಪುರ ಮಧ್ಯೆ ಕಳೆದ 15 ದಿನಗಳಿಂದ ಸಂಚಾರ ಸ್ಥಗಿತಗೋಂಡಿದೆ. ಬಂದರು ಮತ್ತು ಒಳನಾಡು ಮತ್ತು ಜಲಸಾರಿಗೆ ಇಲಾಖೆ ದುರಸ್ತಿ ಮಾಡಿಲ್ಲ. ಇದರಿಂದವಿಜಯನಗರ, ಗದಗ ಮತ್ತು ಹಾವೇರಿ ಜಿಲ್ಲೆಗಳ ಪ್ರಯಾಣಿಕರಿಗೆ ಸಂಪರ್ಕ ಕೊಂಡಿ ಕಡಿತಗೊಂಡಿದೆ. ಮಾಗಳ ಹಾಗೂ ಮುಂಡರಗಿ ತಾಲೂಕಿನ ವಿಠಲಾಪುರ ಮಧ್ಯೆ ತುಂಗಭದ್ರಾ ನದಿಯಲ್ಲಿ ನಾಡದೋಣಿ ಸಂಚರಿ ಸುತ್ತಿದೆ. ನಿತ್ಯ ನೂರಾರು ಪ್ರಯಾಣಿಕರು ಲಕ್ಷೇಶ್ವರ, ಹೊಳೆ ಇಟಗಿ, ಶಿರಹಟ್ಟಿ, ಬೆಳ್ಳಟ್ಟಿ, ಬಾಗೇವಾಡಿ, ಕಪ್ಪತ್ತ ಗುಡ್ಡ ಸೇರಿದಂತೆ ಇತರೆ ಕಡೆಗಳಿಗೆ ಮಾಗಳದಿಂದ ಮೂಲಕ ಪ್ರಯಾಣಿಸುತ್ತಿದ್ದರು.
ಈ ನಾಡದೋಣಿಯ ಕಬ್ಬಿಣದ ತಳಪಾಯದಲ್ಲಿ ಸಾಕಷ್ಟುರಂಧ್ರಗಳು ಬಿದ್ದಿವೆ. ಇದರಿಂದ ದೋಣಿಯೊಳಗೆ ನೀರು ನುಗ್ಗುತ್ತಿದ್ದು, ಸಂಚಾರ ಸ್ಥಗಿತಗೊಂಡರು ದುರಸ್ತಿ ಗೆ ಮುಂದಾಗಿಲ್ಲ.ಇದೀಗ ಮೈಲಾರಕ್ಕೆ ಹೋಗಿ ಅಲ್ಲಿಂದ ಸೇತುವೆ ದಾಟಿ ಹೋಗಬೇಕಿದೆ ಇದರಿಂದ 30ರಿಂದ 40 ಕಿ.ಮೀ. ಸುತ್ತುವರೆದು ಬೇರೆ ಕಡೆಗಳಿಗೆ ಹೋಗುವ ಸ್ಥಿತಿ ಇದೆ. ಕೂಡಲೇ ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಕೂಡಲೇ ದುರಸ್ತಿ ಮಾಡಬೇಕು ಎಂದು ಜನರು ಒತ್ತಾಯಿಸಿದ್ದಾರೆ.