ಧಾರವಾಡ - ಹುಬ್ಬಳ್ಳಿ

ಮಹಾಂತ ಶಿವಯೋಗಿಗಳ ಜಯಂತಿ: ವ್ಯಸನ ಮುಕ್ತ ಸಮಾಜಕ್ಕೆ ಕರೆ

ಮಹಾಂತ ಶಿವಯೋಗಿಗಳ ಜಯಂತಿ: ವ್ಯಸನ ಮುಕ್ತ ಸಮಾಜಕ್ಕೆ ಕರೆ

ಲೋಕದರ್ಶನ ವರದಿ 

ಧಾರವಾಡ 01: ಮುರಗಾ ಮಠದ ಪೂಜ್ಯ ಡಾ. ಮಲ್ಲಿಕಾರ್ಜುನ ಮಹಾಸ್ವಾಮಿಗಳು ಮಹಾಂತ ಶಿವಯೋಗಿಗಳ ಜಯಂತಿ ಅಂಗವಾಗಿ ಆಯೋಜಿಸಿದ್ದ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾದಕ ವ್ಯಸನ ಹಾಗೂ ದುಶ್ಚಟಗಳಿಂದ ದೂರವಿದ್ದು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಯುವಜನತೆ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು. ಆರೋಗ್ಯವೆಂದರೆ ಕೇವಲ ದೈಹಿಕ ಆರೋಗ್ಯವಲ್ಲ; ಮಾನಸಿಕ, ಆಧ್ಯಾತ್ಮಿಕ ಹಾಗೂ ಸಾಮಾಜಿಕ ಆರೋಗ್ಯವೂ ಮುಖ್ಯ ಎಂದು ಅವರು ಹೇಳಿದರು. ಮಹಾಂತ ಶಿವಯೋಗಿಗಳ ಸರಳತೆ, ಶಿಸ್ತು ಮತ್ತು ಸಂಯಮದ ಜೀವನ ಎಲ್ಲರಿಗೂ ಮಾದರಿ ಎಂದರು.

ಜಿಲ್ಲಾಧಿಕಾರಿ ಗೀತಾ ಸಿ.ಡಿ. ಮಾತನಾಡಿ, ವಿದ್ಯಾರ್ಥಿಗಳು ಮಾದಕ ವ್ಯಸನಗಳಿಗೆ ಬಲಿಯಾಗದೆ ತಮ್ಮ ಜೀವನವನ್ನು ರಕ್ಷಿಸಿಕೊಳ್ಳಬೇಕು. ವ್ಯಸನದಿಂದ ಕುಟುಂಬ ಮತ್ತು ಸಮಾಜದ ಮೇಲೂ ದುಷ್ಪರಿಣಾಮ ಉಂಟಾಗುತ್ತದೆ ಎಂದು ಎಚ್ಚರಿಸಿದರು. ಡಿಮಾನ್ಸ್‌ ನಿರ್ದೇಶಕ ಡಾ. ಅರುಣಕುಮಾರ ಸಿ. ಅವರು ಮಾದಕ ವ್ಯಸನವು ವ್ಯಕ್ತಿಯ ಜೊತೆಗೆ ಇಡೀ ಕುಟುಂಬದ ಮೇಲೆ ಪರಿಣಾಮ ಬೀರುತ್ತದೆ. ವ್ಯಸನ ಮುಕ್ತ ಭಾರತ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಾನಸಿಕ ಆರೋಗ್ಯ ಮತ್ತು ವ್ಯಸನ ಮುಕ್ತಿಯ ಕುರಿತು ತಜ್ಞರಿಂದ ಉಪನ್ಯಾಸ, ಪ್ರತಿಜ್ಞಾ ವಿಧಿ ಹಾಗೂ ಜಾಗೃತಿ ಕಾರ್ಯಕ್ರಮಗಳು ನಡೆದವು. ಡಿಮಾನ್ಸ್‌ ಸಂಸ್ಥೆಯ ಅಧಿಕಾರಿಗಳು, ವೈದ್ಯರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. 


ಸುದ್ದಿ ಓದಿ