ಮಹಾರಾಣಾ ಪ್ರತಾಪ್ ಸಿಂಗ್ ಪ್ರತಿಮೆಗೆ ಮಾಲಾರ್ಪಣೆ

Maharana Pratap Jayanti

ಹುಬ್ಬಳ್ಳಿ 10: ಅಪ್ರತಿಮ ವೀರ, ಅದ್ವಿತೀಯ ಶೌರ್ಯ, ಪರಾಕ್ರಮಗಳ ಮೂಲಕ, ಸಂಸ್ಕೃತಿ, ಸ್ವಾಭಿಮಾನವನ್ನು ರಕ್ಷಿಸಿದ ಅಪ್ರತಿಮ ಹೋರಾಟಗಾರ ಮಹಾರಾಣಾ ಪ್ರತಾಪ್ ಸಿಂಗ್   ಅವರ  ಜಯಂತಿ ನಿಮಿತ್ ಮಹಾರಾಣಾ ಪ್ರತಾಪ್ ಸಿಂಗ್ ಪ್ರತಿಮೆಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ  ಮಾಲಾರ್ಪಣೆ ಮಾಡುವ ಮೂಲಕ ಗೌರವ ಅರ್ಪಣೆ ಮಾಡಿ, ಭಕ್ತಿ ಪೂರ್ವಕ ನಮನಗಳನ್ನು ಸಲ್ಲಿಸಲಾಯಿತು ಮಹಾರಾಣಾ ಪ್ರತಾಪ್ ಸಿಂಗ್ ಅವರ ಹೊರಾಟದ ಬದುಕನ್ನು ಸ್ಮರಣೆ ಮಾಡಲಾಯಿತು.

ವಾಕರಸಾ ಸಂಸ್ಥೆಯ ಮಾಜಿ ಅಧ್ಯಕ್ಷ ಸದಾನಂದ ಡಂಗನವರ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ, ಸಾಹಿತಿ ಪ್ರೊ ಎಸ್‌.ಎಂ.ಸಾತ್ಮಾರ, ಉಪಾಧ್ಯಕ್ಷ ಚನ್ನಬಸಪ್ಪ ಧಾರವಾಡಶೆಟ್ಟರ, ಪವನ ಡಂಗನವರ, ಮುಂತಾದವರು ಇದ್ದರು.ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‌್ಯದರ್ಶಿ, ಕರ್ನಾಟಕಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ,  ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ ಅವರು ಸ್ವಾಗತಿಸಿ, ನಿರೂಪಿಸಿದರು.