ಮಹಾರಾಷ್ಟ್ರ; ಕೊರೊನಾ ಸೋಂಕಿನಿಂದ ೪೦೦ಕ್ಕೂ ಹೆಚ್ಚು ಸಾವು, ೧೨೭ ಹೊಸ ಪ್ರಕರಣ ಪತ್ತೆ
ಮುಂಬೈ, ಏ ೨೮, ದೇಶದಲ್ಲಿ ಕೊರೊನಾ ಬಾಧಿತ ರಾಜ್ಯಗಳಲ್ಲಿ ಮೊದಲ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ ಕೋವಿಡ್ -೧೯ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ೪೦೦ಕ್ಕೆ ಏರಿಕೆಯಾಗಿದೆ. ಪುಣೆಯಲ್ಲಿ ಪರಿಸ್ಥಿತಿ ಮತ್ತಷ್ಟು ಸೂಕ್ಷ್ಮವಾಗಿದೆ. ಕಳೆದ ೧೨ ಗಂಟೆಗಳಲ್ಲಿ ಹೊಸದಾಗಿ ೧೨೭ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ೧,೭೨೨ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಭಗವಾನ್ ಪವಾರ್ ಗುರುವಾರ ತಿಳಿಸಿದ್ದಾರೆ. ಮತ್ತೊಂದೆಡೆ ಮಹಾರಾಷ್ಟ್ರದಲ್ಲಿ ಕೋವಿಡ್ -೧೯ ಪ್ರಕರಣಗಳು ೧೦ಸಾವಿರಕ್ಕೆ ಏರಿಕೆಯಾಗಿದ್ದು, ಮೃತರ ಸಂಖ್ಯೆ ೪೦೦ರ ಗಡಿ ದಾಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.