ಜಿಲ್ಲಾಡಳಿತದಿಂದ ಮಹರ್ಷಿ ಭಗೀರಥ ಜಯಂತಿ ಆಚರಣೆ
ಬಳ್ಳಾರಿ 27: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಾಂಸ್ಕೃತಿಕ ಸಮುಚ್ಚಯ ಸಭಾಂಗಣದಲ್ಲಿ ಗುರುವಾರ ಮಹರ್ಷಿ ಭಗೀರಥ ಜಯಂತಿಯನ್ನು ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಆರ್.ಸುರೇಶಬಾಬು ಅವರು, ಮಹರ್ಷಿ ಭಗೀರಥ ಅವರ ಭಾವಚಿತ್ರಕ್ಕೆ ಪುಷ್ಪರ್ಚಾನೆ ಮಾಡಿ ಗೌರವ ನಮನಗಳನ್ನು ಸಲ್ಲಿಸಿದರು.
ಉಪ್ಪಾರ ಸಮಾಜದ ಹಿರಿಯ ಮುಖಂಡರುಗಳು, ಪದಾಧಿಕಾರಿಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ಇನ್ನಿತರರು ಉಪಸ್ಥಿತರಿದ್ದರು