ಅದ್ದೂರಿಯಾಗಿ ಜರುಗಿದ ಮಹರ್ಷಿ ವಾಲ್ಮೀಕಿ ಜಯಂತಿ
ತಾಳಿಕೋಟಿ 26: ಪಟ್ಟಣದಲ್ಲಿ ತಾಲೂಕ ಆಡಳಿತ, ತಾಲೂಕು ಪಂಚಾಯತ ತಾಳಿಕೋಟಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪುರಸಭೆ ತಾಳಿಕೋಟಿ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸೋಮವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಯಂತಿ ಅಂಗವಾಗಿ ತಾಳಿಕೋಟಿ ಪಟ್ಟಣದಲ್ಲಿ ಮುಂಜಾನೆ ಎಲ್ಲಾ ಸರ್ಕಾರಿ ಶಾಲೆ, ಕಚೇರಿ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಶ್ರೀ ವಾಲ್ಮೀಕಿ ಮಹರ್ಷಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ತಾಲೂಕ ಆಡಳಿತ ಹಾಗೂ ವಾಲ್ಮೀಕಿ ಸಮಾಜದ ಸಹಯೋಗದಲ್ಲಿ ಪಟ್ಟಣದ ದೇವರಹಿಪ್ಪರಗಿ ರಸ್ತೆಯಲ್ಲಿರುವ ಶ್ರೀ ವಾಲ್ಮೀಕಿ ವೃತ್ತದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.
ನಂತರ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ವೇದಿಕೆ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಸಿಲ್ದಾರ್ ಎಂ.ಎಸ್.ಅರಕೇರಿ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರಾದ ಶರಣಗೌಡ ಪೊಲೀಸ್ ಪಾಟೀಲ ಹಾಗೂ ನ್ಯಾಯವಾದಿ ಪ್ರಭಾಕರ ಗುಡಗುಂಟಿ ಅವರು ವಾಲ್ಮೀಕಿ ಅವರ ಜೀವನ ಸಂದೇಶ ಕುರಿತು ಮಾರ್ಮಿಕವಾಗಿ ಮಾತನಾಡಿದರು. ಮುದ್ದೇಬಿಹಾಳ ಕ್ಷೇತ್ರ ಸಮನ್ವಯ ಅಧಿಕಾರಿಗಳಾದ ಆರ್. ಬಿ. ದಮ್ಮೂರಮಠ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಈ ಬಾರಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸಮಾಜದ ಮಕ್ಕಳಿಗೆ ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ವಾಲ್ಮೀಕಿ ಸಮಾಜದ ಗಣ್ಯರಾದ ಕಾಶಿನಾಥ ಪಾಟೀಲ ಅವರು ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಅನುಸೂಯಾ ಚಲವಾದಿ, ಪುರಸಭೆ ಮುಖ್ಯಾಧಿಕಾರಿ ಸುನಿಲ್ ಪಾಟೀಲ, ತಾಳಿಕೋಟಿ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಅಶೋಕ ಜಿ.ಬಿರಾದಾರ,
ಪಿಎಸ್ಐ ಜ್ಯೋತಿ ಕೋತ್, ಸಮಾಜ ಕಲ್ಯಾಣ ಇಲಾಖೆಯ ಶಿವಲಿಂಗ ಹಚಡದ, ಕೃಷಿ ಅಧಿಕಾರಿ ಮಹೇಶ ಜೋಶಿ, ವಾಲ್ಮೀಕಿ ಸಮಾಜದ ಹಿರಿಯರಾದ ದಂಡಪ್ಪ ಬಾಗೇವಾಡಿ, ಸಮಾಜದ ಅಧ್ಯಕ್ಷ ಬಸವರಾಜ ದೇವದುರ್ಗ, ಯಮನಪ್ಪ ಬರ್ದೇನಾಳ, ಜಗದೀಶ ಪಾಟೀಲ, ಹಣಮಂತ ಮೇಲಿನಮನಿ, ಶ್ರೀಕಾಂತ ಕೊಡೆಕಲ್ಲ, ಮಲ್ಲು ಬಲಶೆಟ್ಟಿಹಾಳ, ಜಗದೀಶ ಪಾಟೀಲ, ಸಮಾಜ ಕಲ್ಯಾಣ ಇಲಾಖೆ ಎಸ್.ಎನ್.ಮಲ್ಲಾಡೆ, ಎಸ್ ಎಂ ಕಲಬುರ್ಗಿ, ಮಹಾಂತೇಶ ತಾಳಿಕೋಟಿ,ಸಮಾಜದ ಗಣ್ಯರು, ಹಿರಿಯರು ಹಾಗೂ ತಾಲೂಕಾ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ನಿಲಯ ಪಾಲಕ ಎನ್ಎಸ್ ಕೋರಿ ಸ್ವಾಗತಿಸಿದರು.ಸಿ. ಆರ್. ಸಿ. ರಾಜು ವಿಜಾಪುರ ನಿರೂಪಿಸಿದರು. ಶಿಕ್ಷಕ ವಿ. ಬಿ. ನಾಯ್ಕೋಡಿ ವಂದಿಸಿದರು.