ಬೈಲಹೊಂಗಲ

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ

ಬೈಲಹೊಂಗಲ 28: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಋಷಿಕವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ವಿದ್ಯಾರ್ಥಿನಿ ಸುಶ್ಮಿತಾ ಸೊಗಲದ ಆದಿಕವಿಯ ಜೀವನದ ಕುರಿತು ಮಾತನಾಡಿದಳು. ಮುಖ್ಯ ಶಿಕ್ಷಕರಾದ ಎನ್‌.ಆರ್‌.ಠಕ್ಕಾಯಿ ಮಾತನಾಡಿ ವಾಲ್ಮೀಕಿ ಮಹರ್ಷಿಗಳು ಬದುಕಿನ ಸತ್ಯ ಅರಿತು ಬದಲಾಗುವುದರ ಮೂಲಕ ಶ್ರೇಷ್ಠ ವ್ಯಕ್ತಿತ್ವ ಹೊಂದಿದ್ದು ನಮಗೆಲ್ಲ ಮಾದರಿಯಾಗಲಿ ಎಂದರು. ರಾಮಾಯಣದಂತಹ ಮಹಾಕಾವ್ಯ ರಚನೆ ಮಾಡಿದ ಅವರ ಆದರ್ಶ ಮಕ್ಕಳಿಗೆ ಪ್ರೇರಣೆ ಎಂದು ಅವರು ಅಭಿಪ್ರಾಯಪಟ್ಟರು.ಕಾರ್ಯಕ್ರಮದಲ್ಲಿ ಎಸ್‌.ಡಿ.ಎಂ.ಸಿ ಉಪಾಧ್ಯಕ್ಷ ವಿನಾಯಕ ಬಡಿಗೇರ, ಶಿಕ್ಷಕರಾದ ಜಗದೀಶ ನರಿ, ಪ್ರವೀಣ ಗುರುನಗೌಡರ, ಶಿವಾನಂದ ಬಳಿಗಾರ, ರೇಖಾ ಸೊರಟೂರ, ಹೇಮಲತಾ ಪುರಾಣಿಕ, ವೀರೇಂದ್ರ ಪಾಟೀಲ, ಸುಮಂಗಲಾ ಹರಕುಣಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ನಿರ್ಮಲಾ ಸೊಗಲದ ಸ್ವಾಗತಿಸಿ, ವಂದಿಸಿದರು. 


ಸುದ್ದಿ ಓದಿ