ಅ. 28ರಂದು ಮಹರ್ಷಿ ವಾಲ್ಮೀಕಿ ಜಯಂತಿ
ತಾಳಿಕೋಟಿ 26: ತಾಲೂಕ ಆಡಳಿತ ತಾಲೂಕ ಪಂಚಾಯತ ಸಮಾಜ ಕಲ್ಯಾಣ ಇಲಾಖೆ ಮದ್ದೇಬಿಹಾಳ ಹಾಗೂ ಪುರಸಭೆ ತಾಳಿಕೋಟಿ ಇವರ ಸಯುಕ್ತ ಆಶ್ರಯದಲ್ಲಿ ಅಕ್ಟೋಬರ್ 28ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುವುದು. ಅಂದು ಮುಂಜಾನೆ 9:00 ಗಂಟೆಗೆ ದೇವರ ಹಿಪ್ಪರಗಿ ರಸ್ತೆಯಲ್ಲಿರುವ ಮಹರ್ಷಿ ವಾಲ್ಮೀಕಿ ವೃತ್ತದಲ್ಲಿ ಪೂಜಾ ಕಾರ್ಯಕ್ರಮ ನೆರವೇರುವುದು ನಂತರ 10 ಗಂಟೆಗೆ ತಹಶೀಲ್ದಾರ ಕಾರ್ಯಾಲಯದಲ್ಲಿ ಪೂಜಾ ಕಾರ್ಯಕ್ರಮ ಹಾಗೂ ವೇದಿಕೆ ಕಾರ್ಯಕ್ರಮ ಜರಗುವುದು.
ವೇದಿಕೆ ಕಾರ್ಯಕ್ರಮದ ಘನ ಅಧ್ಯಕ್ಷತೆ ಹಾಗೂ ಉದ್ಘಾಟನೆಯನ್ನು ಮುದ್ದೇಬಿಹಾಳ ಶಾಸಕ ಸಿ. ಎಸ್. ನಾಡಗೌಡ ಅಪ್ಪಾಜಿ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಸಚಿವ ಹಾಗೂ ಉಸ್ತುವಾರಿ ಸಚಿವ ಡಾ. ಎಂ .ಬಿ .ಪಾಟೀಲ. ಮಾನ್ಯ ಜವಳಿ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ್ ಎಸ್ ಪಾಟೀಲ. ವಿಧಾನ ಪರಿಷತ್ ಸದಸ್ಯ ಹಾಗೂ ನವದೆಹಲಿ ಕರ್ನಾಟಕ ವಿಶೇಷ ಪ್ರತಿನಿಧಿ 2 ಪ್ರಕಾಶ ಹುಕ್ಕೇರಿ. ವಿಜಯಪುರ ಸಂಸದ ರಮೇಶ ಜಿಗಜಿಣಗಿ. ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ. ಪ್ರಕಾಶ ರಾಥೋಡ. ಸುನಿಲ್ ಗೌಡ ಪಾಟೀಲ .ಪಿ .ಎಚ್ .ಪೂಜಾರ. ತಾಳಿಕೋಟಿ ತಾಲೂಕ ವಾಲ್ಮೀಕಿ ಸಂಘದ ಅಧ್ಯಕ್ಷ ಬಸವರಾಜ ದೇವದುರ್ಗ ಆಗಮಿಸುತ್ತಿದ್ದು ವಿಶೇಷ ಉಪನ್ಯಾಸಕರಾಗಿ ತಾಳಿಕೋಟೆ ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕ ಪ್ರೇಮನಗೌಡ ಪಾಟೀಲ ಆಗಮಿಸವರು. ವೇದಿಕೆಯಲ್ಲಿ ತಹಸೀಲ್ದಾರ ಶ್ರೀಮತಿ ಕೀರ್ತಿ ಚಾಲಕ .ತಾಲೂಕ ಪಂಚಾಯತ ಇಓ ಬಸನಗೌಡ ಬಿರಾದಾರ. ಪುರಸಭೆ ಮುಖ್ಯ ಅಧಿಕಾರಿ ಮೋಹನ್ ಜಾಧವ . ಮುದ್ದೇಬಿಹಾಳ ಸಿಪಿಐ ಎಂ ಎಸ್ ತುಳಸಿಗೇರಿ ಉಪಸ್ಥಿತ ಇರಲಿದ್ದಾರೆ ಎಂದು ಮುದ್ದೇಬಿಹಾಳ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಲಮಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ