ಬಳ್ಳಾರಿ

ಮಾನವಿಯತೆ ಧರ್ಮ ಪ್ರತಿಪಾದಿಸಿದ ಮಹರ್ಷಿ ವಾಲ್ಮೀಕಿ: ಶಾಸಕ ನಾರಾ ಭರತ್ ರೆಡ್ಡಿ

ಮಾನವಿಯತೆ ಧರ್ಮ ಪ್ರತಿಪಾದಿಸಿದ ಮಹರ್ಷಿ ವಾಲ್ಮೀಕಿ: ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ,ಅ.28: ಮಾನವಿಯತೆಯೇ ಧರ್ಮ ಎಂಬುದನ್ನು ಪ್ರತಿಪಾದಿಸಿದ ಮಹಾನ್ ದಾರ್ಶನಿಕ ಆದಿಕವಿ ಮಹರ್ಷಿ ವಾಲ್ಮೀಕಿ ಅವರು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಹೇಳಿದರು. 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದ ರಸ್ತೆಯ ನಲ್ಲಚೇರುವು ಪ್ರದೇಶದ ವಾಲ್ಮೀಕಿ ಭವನದಲ್ಲಿ ಏರಿ​‍್ಡಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ರತ್ನಕರ ಎಂಬ ವ್ಯಕ್ತಿ ತನ್ನ ಶಕ್ತಿಯಿಂದ ಮಹರ್ಷಿ ವಾಲ್ಮೀಕಿ ಆದರು. ಅವರು, ಯಾವುದೇ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾದವರಲ್ಲ. ರಾಮಾಯಣ ಮಹಾಕಾವ್ಯ ಬರೆಯುವ ಮೂಲಕ ಸತತ ಪರಿಶ್ರಮವಿದ್ದಲ್ಲಿ ಸಾಧನೆ ಮಾಡಬಹುದು ಎಂಬುದನ್ನು ತೋರಿಸಿಕೊಟ್ಟವರು. 

24,000 ಕಾವ್ಯಗಳನ್ನು ರಚಿಸುವ ಮೂಲಕ ವಿಶ್ವಕ್ಕೆ ರಾಮಾಯಣದಂತಹ ಮಹಾನ್ ಗ್ರಂಥವನ್ನು ನೀಡಿದ ಮಹರ್ಷಿ ವಾಲ್ಮೀಕಿ ಅವರು ಮಾನವ ಕುಲಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಹಾಗೆಯೇ ಮಾನವಿಯತೆಯೇ ಧರ್ಮ ಎಂಬುದನ್ನು ಪ್ರತಿಪಾದಿಸಿದ್ದಾರೆ ಎಂದು ಹೇಳಿದರು. 

ಮಾನವ ಕುಲಕ್ಕೆ ಮಹರ್ಷಿ ವಾಲ್ಮೀಕಿ ಅವರ ರಾಮಾಯಣ ಕೃತಿ ಉತ್ತಮ ಕೊಡುಗೆ, ಹಿಂದಿನ ಕಾಲದ ಆದರ್ಶ ಮಹನೀಯರ ಉತ್ತಮ ವಿಚಾರಗಳನ್ನು ಎಲ್ಲರೂ ತಿಳಿದುಕೊಳ್ಳಬೇಕಾಗಿದೆ ಎಂದು ಅಭಿಪ್ರಾಯ ಪಟ್ಟರು. 

ಸರ್ಕಾರದಿಂದ ಹಲವಾರು ಯೋಜನೆಗಳಡಿ ಸಾಲ-ಸೌಲಭ್ಯ ಒದಗಿಸಲಾಗುತ್ತಿದ್ದು, ಅವುಗಳನ್ನು ಬಳಸಿಕೊಂಡು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಆಶಿಸಿದರು. 

ಭಾರತೀಯ ವಾಲ್ಮೀಕಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಕುಷ್ಟಗಿಯ ಉಪನ್ಯಾಸಕರಾದ ರಂಗನಾಥ ಕುರ‌್ರ​‍್ಪ ಸುಬೇದಾರ ಅವರು ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕುರಿತು ವಿಶೇಷ ಉಪನ್ಯಾಸ ನೀಡಿದರು. 

ಕಾರ್ಯಕ್ರಮದಲ್ಲಿ ಗಣ್ಯರೆಲ್ಲರೂ ಸೇರಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. 

ಇದಕ್ಕೂ ಮುನ್ನ ನಲ್ಲಚೆರುವು ಪ್ರದೇಶದ ವಾಲ್ಮೀಕಿ ಭವನದ ಆವರಣದ ಮುಂಭಾಗದಲ್ಲಿರುವ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಲಾಯಿತು. 

ಮಹಾನಗರ ಪಾಲಿಕೆ ಉಪಮೇಯರ್ ಬಿ.ಜಾನಕಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್ ಕೆ.ಶಂಕಿನದಾಸ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಹೆಚ್‌.ಮಲ್ಲಿಕಾರ್ಜುನ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಪಾಲಿಕೆ ಸದಸ್ಯರು, ಎಲ್ಲಾ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ವಾಲ್ಮೀಕಿ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. 

ಸಾಧಕರು ಹಾಗೂ ವಿದ್ಯಾರ್ಥಿಗಳಿಗೆ ಸನ್ಮಾನ: 

ಎಸ್‌ಎಸ್‌ಎಲ್‌ಸಿ ವಿಭಾಗ:ಅತಿಹೆಚ್ಚು ಅಂಕ ಪಡೆದ (625/620) ವಿದ್ಯಾರ್ಥಿ ಓಬಳೇಶ ಅವರಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ರೂ.1 ಲಕ್ಷ ಮೊತ್ತದ ಚೆಕ್, ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಇನ್ನುಳಿದ ಕರಿಬಸಮ್ಮ.ಬಿ.ಇ., ವೆಂಕಟೇಶ.ಪಿ., ಪಲ್ಲವಿ.ವಿ., ಟಿ.ಪಿ.ಭಾಗ್ಯಶ್ರೀ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪಿಯುಸಿ ವಿಭಾಗ:ವೈ.ಮಣಿಕಂಠ, ಸಾಯಿ ಸಂಕೇತ, ಬಿ.ಉಮೇಶ, ಹರೀಶ್‌.ಎ., ಅಂಧ್ಯಾಳ್ ಯಶೋಧ. ಪಿಹೆಚ್‌ಡಿ ಪದವಿ ವಿದ್ಯಾರ್ಥಿಗಳು: ಡಾ.ಶರಣಗೌಡ, ಡಾ.ಪಾಂಡುರಂಗ, ಡಾ.ಮೌನೇಶ್‌.ಕೆ. 

ಕೃಷಿ ಕ್ಷೇತ್ರ: ಧರ್ಮಣ್ಣ, ರಾಮಕೃಷ್ಣ, ಮಲಿಯಕ್ಕ. ತೋಟಗಾರಿಕೆ ಕ್ಷೇತ್ರ: ಶೇಖರ್‌. 

ಕಲಾ ಮತ್ತು ಸಮಾಜ ಸೇವೆ: ಪಾಮಣ್ಣ ಮೀನಹಳ್ಳಿ, ಯರ‌್ರಮ್ಮ, ಚೆಲುವಾದಿ ಬಸವರಾಜ, ಆರ್‌.ಎನ್‌.ಶಿವರಾಜ. 

ಗಮನ ಸೆಳೆದ ಅದ್ದೂರಿ ಮೆರವಣಿಗೆ, ಕಲಾತಂಡ:ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಅಂಗವಾಗಿ ಏರಿ​‍್ಡಸಿದ್ದ ವಿವಿಧ ಸಾಂಸ್ಕೃತಿಕ ಕಲಾ ತಂಡಗಳನ್ನೊಳಗೊಂಡ ಮೆರವಣಿಗೆಯು ಗಮನ ಸೆಳೆಯಿತು. 

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು, ನಗರದ ಡಾ.ರಾಜ್‌ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದ ಆವರಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಮಾಲಾರೆ​‍್ಣ ಹಾಗೂ ಪುಷ್ಪನಮನ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದರು. 

ಮೆರವಣಿಗೆಯು ಮುನಿಸಿಪಲ್ ಕಾಲೇಜು ಮೈದಾನದಿಂದ ಆರಂಭವಾಗಿ ರಾಯಲ್ ವೃತ್ತದ ಮೂಲಕ ಬ್ರೂಸ್‌ಪೇಟೆ ಪೊಲೀಸ್ ರಾಣೆ ಮಾರ್ಗವಾಗಿ ಹೆಚ್‌.ಆರ್‌.ಗವಿಯಪ್ಪ ವೃತ್ತದ ಮೂಲಕ ಕೌಲ್‌ಬಜಾರ್ ಮೊದಲನೇ ರೈಲ್ವೇ ಗೇಟ್‌ನಿಂದ ನಲ್ಲಚೇರುವು ಪ್ರದೇಶದ ವಾಲ್ಮೀಕಿ ಭವನಕ್ಕೆ ತಲುಪಿತು. 


ಸುದ್ದಿ ಓದಿ