ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ
ಯರಗಟ್ಟಿ, ಅ.2: ಪಟ್ಟಣದ ತಹಶೀಲ್ದಾರ್ ಕಚೇರಿ, ತಾಲೂಕು ಪಂಚಾಯಿತಿ ಕಚೇರಿ, ಎಪಿಎಂಸಿ ಕಚೇರಿ, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಶುಕ್ರವಾರ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು.
ತಹಶೀಲ್ದಾರ್ ಎಂ.ವಿ. ಗುಂಡಪ್ಪಗೋಳ ಅವರು ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಗೌರವ ಅರ್ಿಸಿದರು. ಬಳಿಕ ಇಬ್ಬರು ಮಹನೀಯರ ಜೀವನ, ಆದರ್ಶ ಹಾಗೂ ಸಾಧನೆಗಳನ್ನು ವಿವರಿಸಿದರು.
ಈ ಸಂದರ್ಭದಲ್ಲಿ ತಾ.ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ತಾ.ಪಂ. ಇಒ ರಾಮಪ್ಪ ರಕ್ಕಸಗಿ, ಎಪಿಎಂಸಿ ಅಧ್ಯಕ್ಷ ನೀಲಕಂಠ ಸಿದ್ದಬಸನ್ನವರ, ಪಶು ವೈದ್ಯಾಧಿಕಾರಿ ಎಂ.ವಿ. ಪಾಟೀಲ, ವಸತಿ ನಿಲಯ ಪಾಲಕಿ ಆಶಾ ಪರೀಟ, ಕಂದಾಯ ನೀರೀಕ್ಷಕ ವೈ.ಎಫ್. ಮುತೇನ್ನವರ, ಗ್ರಾಮ ಆಡಳಿತಾಧಿಕಾರಿ ಎಲ್.ಬಿ. ದಳವಾಯಿ, ಮುಖ್ಯ ಶಿಕ್ಷಕ ಎ.ಎ. ಮಕ್ತುಮನ್ನವರ, ಪಿಎಸ್‌ಐ ಎಲ್.ಬಿ. ಮಾಳಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.