ಮಹಾಯೋಗಿ ವೇಮನ ಜಯಂತಿ
ಗದಗ 17: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಇವರುಗಳ ಸಹಯೋಗದಲ್ಲಿ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮವನ್ನು ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ದಲ್ಲಿ ಜನೆವರಿ 19 ರಂದು ಬೆಳಿಗ್ಗೆ 10.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ.
ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಮುಖ್ಯಅತಿಥಿಗಳಾಗಿ ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್ , ಸಂಸದರುಗಳಾದ ಶಿವಕುಮಾರ ಉದಾಸಿ, ಪಿ.ಸಿ.ಗದ್ದಿಗೌಡರ, ವಿಧಾನಪರಿಷತ್ ಸದಸ್ಯರುಗಳಾದ ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ, ನರಗುಂದ ಶಾಸಕರಾದ ಸಿ.ಸಿ.ಪಾಟೀಲ, ರೋಣ ಶಾಸಕ ಜಿ.ಎಸ್.ಪಾಟೀಲ, ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ, ಗದಗ ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ, ನಗರಸಭೆ ಉಪಾಧ್ಯಕ್ಷೆ ಶ್ರೀಮತಿ ಸುನಂದಾ ಬಾಕಳೆ ಆಗಮಿಸುವರು.
ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಕನ್ನಡ ಪ್ರಾಧ್ಯಾಪಕ ಡಾ.ರಮೇಶ ಕಲ್ಲನಗೌಡರ ಮಹಾಯೋಗಿ ವೇಮನರ ಜೀವನ ಮತ್ತು ಸಂದೇಶಗಳ ಕುರಿತು ಉಪನ್ಯಾಸ ನೀಡಲಿದ್ದಾರೆ. ಪಂ. ವೆಂಕಟೇಶ ಅಲ್ಕೋಡ್ ಮತ್ತು ತಂಡದವರಿಂದ ವಚನ ಗಾಯನ ಸ್ಪರ್ಧೆ ಜರುಗಲಿದೆ.
ವಾಣಿಜ್ಯ ತೆರಿಗೆ ಆಯುಕ್ತರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಿ.ಶಿಖಾ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ ಬಿ ಸರ್ವರಿಗೂ ಸ್ವಾಗತ ಕೋರಿದ್ದಾರೆ.