ಕ್ಷೇತ್ರದ ಅಭಿವೃದ್ಧಿ ಹರಿಕಾರ ಮಹೇಂದ್ರ ತಮ್ಮಣ್ಣವರಿಗೆ ಸಚಿವ ಸ್ಥಾನ ನೀಡಬೇಕು: ಪುಟ್ಟುಗೌಡ ನಾಯಿಕ
Mahendra Thammanna, the pioneer of development in the area, should be given a ministerial position:
ಲೋಕದರ್ಶನ ವರದಿ
ಪಾಲಬಾವಿ 02: ನೂತನ ಸಿಎಂ ಡಿಕೆ ಶಿವಕುಮಾರ್ ಸಾಹೇಬರ ಸಚಿವ ಸಂಪುಟದಲ್ಲಿ ಕುಡಚಿ ಮತಕ್ಷೇತ್ರದ ಜನಪ್ರಿಯ ಶಾಸಕ ಮಹೇಂದ್ರ ತಮ್ಮಣ್ಣವರಗೆ ಸಚಿವ ಸ್ಥಾನ ನೀಡಬೇಕೆಂದು ಕಪ್ಪಗುಲದ್ದಿ ಗ್ರಾಮದ ಕಾಂಗ್ರೆಸ್ ಪಕ್ಷದ ನಾಯಕ, ಗ್ರಾಪಂ ಮಾಜಿ ಅಧ್ಯಕ್ಷ ಪುಟ್ಟಗೌಡ ನಾಯಿಕ, ತಾಪ ಮಾಜಿ ಸದಸ್ಯ ಶಿವಪ್ಪ ದಡ್ಡಿಮನಿ ಸೇರಿದಂತೆ ಕಾರ್ಯಕರ್ತರು ಹೈಕಮಾಂಡ್ ಹಾಗೂ ಕೆಪಿಸಿಸಿಯನ್ನು ಒತ್ತಾಯಿಸಿದ್ದಾರೆ.
ಕುಡಚಿ ಮತಕ್ಷೇತ್ರದಲ್ಲಿ ಅಭಿವೃದ್ಧಿ ಹರಿಕಾರರು, ಸರಳತೆಯಿಂದ ಕ್ಷೇತ್ರದ ಜನರ ಮನಸ್ಸು ಗೆದ್ದವರು. ಕ್ಷೇತ್ರದಲ್ಲಿ ಪಕ್ಷಾತೀತವಾಗಿ ಎಲ್ಲರೂ ಮನಸ್ಸಿನಲ್ಲಿ ಉಳಿದುಕೊಂಡವರು. ಸರಕಾರದ ಮಹತ್ವಕಾಂಕ್ಷೆ ಯೋಜನೆಗಳಾದ ಪಂಚ ಗ್ಯಾರಂಟಿಗಳಲ್ಲಿಯೂ ಸಾವಿರಾರು ಕೋಟಿ ಅನುದಾನವನ್ನು ಕ್ಷೇತ್ರದಲ್ಲಿ ಕ್ಷೇತ್ರದ ಸರ್ವಾಂಗಿನ ಅಭಿವೃದ್ಧಿಗಾಗಿ ಅನುದಾನವನ್ನು ಅನುಷ್ಠಾನಕ್ಕೆ ಅಂಕಣ ಬದ್ಧವಾಗಿರುವ ಹೆಮ್ಮೆಯ ಶಾಸಕ ಮಹೇಂದ್ರ ತಮ್ಮಣ್ಣವರಗೆ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು.
ಬಡವರ ಅನ್ನದಾತ, ಪಂಚ ಗ್ಯಾರಂಟಿಗಳ ಸರದಾರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಾಗೂ ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸಾಹೇಬರ ಹಾಗೂ ರಾಜ್ಯದ ಹಾಗೂ ಜಿಲ್ಲೆಯ ಹಿರಿಯ ಸಚಿವರೊಂದಿಗೆ ಉತ್ತಮ ಒಡನಾಟ ಹೊಂದಿರುವ ಕುಡಚಿ ಮತಕ್ಷೇತ್ರದ ಶಾಸಕ ಮಹೇಂದ್ರ ತಮ್ಮಣ್ಣವರಿಗೆ ಸಚಿವ ಸ್ಥಾನವನ್ನು ನೀಡಬೇಕೆಂದು ಕಪ್ಪಲಗುದ್ದಿ ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಕ್ಷದ ಹೈಕಮಾಂಡ್ ಹಾಗೂ ಕೆಪಿಸಿಸಿ ನಾಯಕರನ್ನು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಯುವ ನಾಯಕ ಗುರುರಾಜ ಬಂಗಿ, ಕಾಂಗ್ರೆಸ್ ಪಕ್ಷದ ಕುಡಚಿ ಬ್ಲಾಕ್ ಅಧ್ಯಕ್ಷ ಪ್ರದೀಪ್ ಹಾಲ್ಗುಣಿ, ತಾಪಂ ಮಾಜಿ ಸದಸ್ಯ ಶಿವಪ್ಪ ದಡ್ಡಿಮನಿ, ಗ್ರಾಪಂ ಮಾಜಿ ಅಧ್ಯಕ್ಷ ಪುಟ್ಟಗೌಡ ನಾಯಿಕ, ಭೀಮಪ್ಪ ಮಂಟೂರ, ಎಸ್‌ಡಿಎಂಸಿ ಅಧ್ಯಕ್ಷ ಗುರು ಅಂಗಡಿ, ಗ್ರಾಪಂ ಮಾಜಿ ಉಪಾಧ್ಯಕ್ಷ ಮಂಜು ಮೇತ್ರಿ, ಎಸ್ಡಿಎಂಸಿ ಮಾಜಿ ಅಧ್ಯಕ್ಷ ಬರಮಪ್ಪ ಉದ್ಧಪ್ಪಗೋಳ, ಬಾಳಪ್ಪ ಐದಮನಿ, ಮಹಾದೇವ ನಾಯಿಕ, ಶ್ರೀಶೈಲ ಕೂಡಲಗಿ, ಶಾಸಕರ ಆಪ್ತ ಸಹಾಯಕ ಶಂಕರ ಚಿಕ್ಕೂಡ, ಸಚಿನ್ ಹಳಕಲ್ಲ ಇತರರು ಇದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 