ಗದಗ 17: ದಲಿತ ಸಾಹಿತ್ಯ ಪರಿಷತ್ತು ರಾಜ್ಯ ಘಟಕ ಗದಗ ಕೊಡಮಾಡುವ ಪುಸ್ತಕ ಪ್ರಶಸ್ತಿ ವಿಭಾಗದಲ್ಲಿ ಮಹೇಶ ಬಳ್ಳಾರಿಯವರ ‘ಕ್ರಾಂತಿಕಾರಿ ಬುಡಕಟ್ಟು ಸಿಂಹ - ಅಲ್ಲೂರಿ ಸೀತಾರಾಮರಾಜು’ ಕೃತಿಗೆ ರಾಷ್ಟ್ರೀಯ ಪುಸ್ತಕ ಪ್ರಶಸ್ತಿ ಲಭಿಸಿದೆ. ಮುಂದಿನ ತಿಂಗಳು ಜೂನ್ 28 ಮತ್ತು 29 ನೇ ತಾರೀಖು ರಾಯಚೂರಿನಲ್ಲಿ ನಡೆಯುವ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕ, ಗದಗ ಅಧ್ಯಕ್ಷರಾದ ಡಾ. ಅರ್ಜುನ ಗೊಳಸಂಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.