ಮತದಾನ ಜಾಗೃತಿ ಅಗತ್ಯ ಮಹೇಶ್ ವಿ ಪೂಜಾರ
ಹೂವಿನ ಹಡಗಲಿ 17: ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲಾ ಮತದಾರರು ತಪ್ಪದೇ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಬೇರುಗಳನ್ನು ಗಟ್ಟಿಗೊಳಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ ಪೂಜಾರ ಹೇಳಿದರು.ಪಟ್ಟಣದ ಜಿ ಪಿ ಜಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ಶಾಲಾ ಶಿಕ್ಷಣ ಇಲಾಖೆ ರಾಷ್ಟ್ರೀಯ ಮತದಾರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಉತ್ತಮ ನಾಯಕರನ್ನು ಗುರುತಿಸಿ ಆರಿಸಿ ತರುವುದು ಮತದಾರರ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.
ಹೊಸ ಅರ್ಹ ಮತದಾರರ ನೋಂದಣಿ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗಬೇಕಾಗಿದೆ.ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ ಇಲಾಖೆಯ ಆದೇಶದಂತೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮತದಾನದ ಪರಿಕಲ್ಪನೆ ಅರ್ಥೈಸುವ ಹಿನ್ನೆಲೆಯಲ್ಲಿ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು.ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ ಹನುಮಂತಪ್ಪ ತಾಲೂಕು ದೈಹಿಕ ಪರೀವೀಕ್ಷಕ ರಫಿ ಅಹಮದ್ ಖವಾಸ್ ಮುಖ್ಯ ಗುರು ಬನ್ನೆಪ್ಪ ಕೊಳಚಿಇತರರು ಉಪಸ್ಥಿತರಿದ್ದರು.ಶಿಕ್ಷಣ ಸಂಯೋಜಕ ಹಣ್ಣಿ ನರೇಶ ನಿರ್ವಹಿಸಿದರು.ತಾಲೂಕಿನ ಸರ್ಕಾರಿ ಅನುದಾನಿತ ಅನುದಾನರಹಿತ ಪ್ರೌಢಶಾಲಾ ಮಕ್ಕಳು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.